Categories: CrimeLatest

ಗರ್ಭದಲ್ಲಿರುವ ಮಗುವಿನ ಡಿಎನ್ಎ ಪರೀಕ್ಷೆಗೆ ಒತ್ತಾಯ: ಅನುಮಾನದ ಬೆಂಕಿಗೆ ಬಲಿಯಾದ ಗರ್ಭಿಣಿ, ಪತಿ ಬಂಧನ

ತೆಲಂಗಾಣದಲ್ಲಿ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ಗರ್ಭದಲ್ಲಿರುವ ಮಗುವಿನ ಪಿತೃತ್ವವನ್ನು ಪ್ರಶ್ನಿಸಿ ಡಿಎನ್‌ಎ ಪರೀಕ್ಷೆ ಮಾಡಿಸಬೇಕೆಂದು ಪತಿ ಪಟ್ಟು ಹಿಡಿದ ಹಿನ್ನೆಲೆ, ಮಾನಸಿಕವಾಗಿ ನೊಂದಿದ್ದ 23 ವರ್ಷದ ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಗರ್ಭಿಣಿಯಾಗಿದ್ದ ಯುವತಿ ಕಳೆದ ಕೆಲವು ದಿನಗಳಿಂದ ಪತಿಯ ಅನುಮಾನಾಸ್ಪದ ನಡವಳಿಕೆಯಿಂದ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಹುಟ್ಟಲಿರುವ ಮಗುವಿನ ಬಗ್ಗೆ ಪತಿ ನಿರಂತರವಾಗಿ ಅನುಮಾನ ವ್ಯಕ್ತಪಡಿಸಿ, ಡಿಎನ್‌ಎ ಪರೀಕ್ಷೆ ನಡೆಸಲೇಬೇಕು ಎಂದು ಒತ್ತಾಯಿಸುತ್ತಿದ್ದನೆಂದು ತಿಳಿದುಬಂದಿದೆ. ಈ ಮಾತುಗಳಿಂದ ಮಹಿಳೆ ತೀವ್ರವಾಗಿ ಮನನೊಂದು ಅವಮಾನ ಭಾವನೆಗೆ ಒಳಗಾಗಿದ್ದರು ಎನ್ನಲಾಗಿದೆ.

ಕೊನೆಗೆ ಮಾನಸಿಕ ಕಿರುಕುಳವನ್ನು ಸಹಿಸಲಾಗದೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಘಟನೆ ಎರಡು ಜೀವಗಳನ್ನು ಬಲಿತೆಗೆದುಕೊಂಡಿದೆ.

ಘಟನೆ ಸಂಬಂಧ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಮೃತ ಮಹಿಳೆಯ ಪತಿ ಹಾಗೂ ಅತ್ತೆಯನ್ನು ಬಂಧಿಸಿದ್ದಾರೆ. ಗರ್ಭಿಣಿಗೆ ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕುಟುಂಬದಲ್ಲಿ ನಂಬಿಕೆ ಹಾಗೂ ಪರಸ್ಪರ ಗೌರವದ ಕೊರತೆ ಎಂತಹ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ದುಃಖಕರ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

8 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

9 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago