ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾತೆ ಮಾಡಿಕೊಡುವ ಹೆಸರಿನಲ್ಲಿ ಹಣದ ಬೇಡಿಕೆ ಇಟ್ಟಿದ್ದ ಪಿಡಿಓ ಗೀತಾಮಣಿ, ಮೂರನೇ ವ್ಯಕ್ತಿಯ ಮುಖಾಂತರ ಲಂಚ ಸ್ವೀಕರಿಸಲು ಯತ್ನಿಸಿದ್ದರೆಂಬುದು ತಿಳಿದುಬಂದಿದೆ. ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು.
ಲೋಕಾಯುಕ್ತ ಡಿ ವೈ ಎಸ್ ಪಿ ಗೌತಮ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಪಿಡಿಓ ಗೀತಾಮಣಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ವೇಳೆ ಲಂಚದ ಹಣವನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಘಟನೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಭ್ರಷ್ಟಾಚಾರ ಮುಂದುವರಿಯುತ್ತಿರುವುದನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಪ್ರಕರಣದ ಕುರಿತಾಗಿ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…