ಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಬಿಲ್ ಬಿಡುಗಡೆಗೊಳ್ಳಲು ಲಂಚ ಕೇಳಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
15ನೇ ಹಣಕಾಸು ಯೋಜನೆಯಡಿ ನಡೆದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ, ಜೆಇ (ಜೂನಿಯರ್ ಇಂಜಿನಿಯರ್) ಶ್ರೀಪಾದ ಕುಲಕರ್ಣಿ ಅವರು ಬಿಲ್ ಪಾವತಿಗೆ 5% ಲಂಚ ಕೇಳಿದ ದೃಶ್ಯವಿರುವ ವಿಡಿಯೋ ಒಂದು ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ಪಿಡಿಓ (ಗ್ರಾಮ ಪಂಕ್ಮಾಯಿತಿ ಅಭಿವೃದ್ಧಿ ಅಧಿಕಾರಿ) ಮಂಜುಶ್ರೀ ಅವರು 3% ಲಂಚ ಕೇಳುತ್ತಿದ್ದಾರೆಂಬ ಉಲ್ಲೇಖವೂ ಕೂಡಾ ಕಾಣಿಸುತ್ತಿದೆ.
ವಿಡಿಯೋ ಭಾರಿ ವ್ಯಾಪ್ತಿಯಲ್ಲಿ ವೈರಲ್ ಆದ ಬಳಿಕ, ಈ ವಿಷಯಕ್ಕೆ ಗಂಭೀರತೆ ನೀಡಿದ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅವರ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಭವರಸಿಂಗ್ ಮೀನಾ ಅವರು ಇಬ್ಬರನ್ನೂ ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಪಾವತಿಗೆ ಸಂಬಂಧಿಸಿದ ಭ್ರಷ್ಟಾಚಾರದ ತೀವ್ರತೆಯತ್ತ ಬೆಳಕು ಚೆಲ್ಲಿದೆ.
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…