ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಪೊಲೀಸರ ತನಿಖೆಯ ನಂತರ ಟ್ವಿಸ್ಟ್ ಸಿಕ್ಕಿದೆ ಅದೇನೆಂದರೆ ದೇಹವನ್ನು 56 ತುಂಡರಿಸಿದ ನಂತರ ಅದನ್ನು ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ನರಬಲಿಯಾದ ರೋಸ್ಲಿನ್ ಹಾಗೂ ಪದ್ಮಾ ಅವರನ್ನು ಕತ್ತು ಹಿಸುಕಿ ಸಾಯಿಸುವುದಕ್ಕೂ ಮೊದಲು ಅವರಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ. ಮಹಿಳೆಯರ ಸ್ತನಗಳನ್ನು ಕತ್ತರಿಸಿ, ರಕ್ತ ಹರಿಯುವಂತೆ ಮಾಡಲಾಗಿದ್ದು, ಬಳಿಕ ಒಂದು ದೇಹವನ್ನು 56 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಮಹಿಳೆಯರ ದೇಹದ ಭಾಗಗಳು ಒಟ್ಟು 3 ಹೊಂಡಗಳಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾಫಿ 2020ರಲ್ಲಿ 75 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಆತ ದಂಪತಿ ಭಗವಲ್ ಸಿಂಗ್ ಹಾಗೂ ಲೈಲಾಗೆ ಬೇಗನೆ ಹಣ ಗಳಿಸಲು ನರಬಲಿ ನೀಡುವಂತೆ ಸಲಹೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಫಿ ಸಾಮಾಜಿಕ ಮಾಧ್ಯಮಗಳಲ್ಲಿ ರೋಸ್ಲಿನ್ ಹಾಗೂ ಪದ್ಮಾರನ್ನು ಸಂಪರ್ಕಿಸಿ, ಅಶ್ಲೀಲ ಚಿತ್ರದಲ್ಲಿ ನಟಿಸಲು ಹಣದ ಆಮಿಷ ಒಡ್ಡಿದ್ದ ಎಂದು ಶಂಕಿಸಲಾಗಿದೆ. ನರಬಲಿ ವೇಳೆ ಶಫಿ ಪದ್ಮಾಳ ಕತ್ತು ಹಿಸುಕಿ, ಶಿರಚ್ಛೇದ ಮಾಡಿ ಆಕೆಯ ದೇಹವನ್ನು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಲೈಲಾ ರೋಸೆಲಿನ್‌ಳ ಕತ್ತು ಹಿಸುಕಿ, ಆಕೆಯ ಸ್ತನಗಳನ್ನು ಕತ್ತರಿಸಿದ್ದಾಳೆ. ಆಕೆಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…