Categories: CrimeLatest

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲದಲ್ಲಿ ದೂರು ದಾಖಲು

ನೆಲಮಂಗಲ: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಗೆ ಕಾರಣವಾಗುವ ರೀತಿಯ ಹೇಳಿಕೆಗಳನ್ನು ನೀಡಿದ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೆಲಮಂಗಲ ನಿವಾಸಿ ಅನಂತಕುಮಾರ್ ಡಿ.ಆರ್. ಅವರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಪೊಲೀಸರು ನಾನ್-ಕಾಗ್ನಿಜಬಲ್ ವರದಿ (ಎನ್‌ಸಿಆರ್) ದಾಖಲಿಸಿಕೊಂಡು ಪ್ರಕರಣವನ್ನು ಪರಿಶೀಲನೆಗೆ ತೆಗೆದುಕೊಂಡಿದ್ದಾರೆ.

ದೂರಿನ ಪ್ರಕಾರ, ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಹುಟ್ಟುಹಾಕುವ ರೀತಿಯ ಹೇಳಿಕೆಗಳನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ನಿರೂಪಕ ಅರುಣ್ ಬಡಿಗೇರ್ ಹಾಗೂ ಸಂಬಂಧಿತ ಖಾಸಗಿ ವಾಹಿನಿಯ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…

4 days ago