ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನವೀನ್ ಕುಮಾರ್, ಆರೋಪಿಯ ವಿಡಿಯೋ ಸಾಮಾಜಿಕ ಭದ್ರತೆಗೆ ಧಕ್ಕೆ ತರುವಂತದ್ದಾಗಿದೆ ಹಾಗೂ ಕೋಮುಗಲಭೆಗೆ ಪ್ರಚೋದನೆ ನೀಡುವ ಪ್ರಯತ್ನವಾಗಿದೆ ಎಂದು ದೂರಿದ್ದರು.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಬಂಧಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ದುರುಪಯೋಗವಾಗುವಂತಹ ವಿಷಯಗಳನ್ನು ಹಂಚುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…