ಧರ್ಮಸ್ಥಳ: ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆದಿದ್ದು, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶೋಧ ಕಾರ್ಯಾಚರಣೆಗೆ ಇನ್ನಷ್ಟು ವೇಗ ನೀಡಿದೆ.
ಇಂದು ದೂರುದಾರನ ಸೂಚನೆಯ ಮೇರೆಗೆ ಏಳನೇ ಹಾಗೂ ಎಂಟನೇ ಪಾಯಿಂಟ್‌ಗಳಲ್ಲಿ ತನಿಖೆ ನಡೆದಿದ್ದು, ಪ್ರಮುಖ ಸೂಚನೆಗಳು ಲಭ್ಯವಾಗಿವೆ. ನೇತ್ರಾವತಿ ನದಿಯ ಸಮೀಪದಲ್ಲಿರುವ ಏಳನೇ ಪಾಯಿಂಟ್‌ನಲ್ಲಿ ಅಧಿಕಾರಿಗಳು ಮಿನಿ ಅರ್ಥ್ ಮೂವರ್ ಸಹಾಯದಿಂದ ಸುಮಾರು ಎಂಟು ಅಡಿ ಮಣ್ಣನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಮಣ್ಣಿನ ಅಡಿಯಲ್ಲಿ ಒಂದು ಕಪ್ಪುಬಣ್ಣದ ವಸ್ತ್ರ (ಕರವಸ್ತ್ರ) ಪತ್ತೆಯಾಗಿದೆ.
ಪತ್ತೆಯಾದ ವಸ್ತುವನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದು, ಪತ್ತೆದಾರಿ ಶ್ವಾನದ ಸಹಾಯದಿಂದ ಅಧ್ಯಯನ ನಡೆಸಿದ ನಂತರ ಎಫ್‌ಎಸ್‌ಎಲ್ (ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯ) ತಜ್ಞರ ಪರಿಶೀಲನೆಗೆ ಕಳಿಸಿದ್ದಾರೆ. ಈ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಯಿತೇ ಎಂಬುದನ್ನು ಮುಂದೆ ತಜ್ಞರ ವರದಿ ಸ್ಪಷ್ಟಪಡಿಸಲಿದೆ.
ಮತ್ತೊಂದೆಡೆ, ಇದೇ ಏಳನೇ ಪಾಯಿಂಟ್‌ನಿಂದ ಕೆಲವು ಮೀಟರ್ ದೂರದಲ್ಲಿರುವ ನೇತ್ರಾವತಿ ನದಿಯ ಮತ್ತೊಂದು ತಟದಲ್ಲಿಯೂ ಶೋಧ ಕಾರ್ಯ ನಡೆಯಿತು. ಆದರೆ ಸುಮಾರು ಆರು ಅಡಿ ಮಣ್ಣು ಅಗೆದರೂ ಅಲ್ಲಿ ಯಾವುದೇ ಅಸ್ಥಿಪಂಜರ ಅಥವಾ ಸಾಮಗ್ರಿಗಳು ಪತ್ತೆಯಾಗಿಲ್ಲ. ಹೀಗಾಗಿ, ಅಧಿಕಾರಿಗಳು ಆ ಸ್ಥಳದಲ್ಲಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವೊಂದು ಪ್ರಮುಖ ತಾಣಗಳಲ್ಲಿ ಶೋಧ ಕಾರ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಎಸ್‌ಐಟಿ ತಂಡ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರೆಸುತ್ತಿದೆ.
ಪರಿಸ್ಥಿತಿ ಇದೀಗ ಗಂಭೀರ ಹಂತಕ್ಕೆ ತಲುಪಿದ್ದು, ಈ ಪ್ರಕರಣದ ನಿಜಾಂಶ ಬಹುತೇಕ ದಿನಗಳಲ್ಲಿ ಬೆಳಕಿಗೆ ಬರುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…