ಬೆಳ್ತಂಗಡಿ, ಆ.7 – ಧರ್ಮಸ್ಥಳ ಶವ ಹೂತು ಪ್ರಕರಣದಲ್ಲಿ ಇಂದು (ಬುಧವಾರ) ಯಾವುದೇ ಶೋಧ ಕಾರ್ಯ ನಡೆದಿಲ್ಲ. ವಿಶೇಷ ತನಿಖಾ ತಂಡ (ಎಸ್‌ಐಟಿ)ದ ನೇತೃತ್ವದಲ್ಲಿ ದಿನದಳು ಶೋಧ ಕಾರ್ಯ ನಡೆಯುತ್ತಿದ್ದ ಪಾಯಿಂಟ್ ನಂ.13 ರಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡದೆ ಹಿಂದಕ್ಕೆ ಹೂಂಡಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ಸ್ಥಳ ಪರಿಶೀಲನೆ ಕಾರ್ಯ ನಡೆಸಲಾಗುತ್ತೆ ಎಂಬ ನಿರೀಕ್ಷೆ ಇದ್ದರೂ, ಎಸ್‌ಐಟಿ ಕಚೇರಿಯಿಂದ ಅರಣ್ಯ, ಕಂದಾಯ ಇಲಾಖೆ ಹಾಗೂ ಸೋಕೋ ತಂಡದ ಅಧಿಕಾರಿಗಳು ಶೋಧ ಸ್ಥಳಕ್ಕೆ ತೆರಳದೆ ದೈನಂದಿನ ಕಾರ್ಯ ನಿರ್ವಹಣೆಗೆ ಮರುಳುಹೋಗಿದ್ದಾರೆ. ಇದರೊಂದಿಗೇ ಶೋಧ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಂತಾಗಿದೆ.
ಇತ್ತ, ಎಸ್‌ಐಟಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ತನಿಖೆಯ ಗಮನ ಈಗ ಸಾಕ್ಷ್ಯ ಪರಿಕರಗಳ ಪರಿಶೀಲನೆಯತ್ತ ಹರಿಯುತ್ತಿದೆ. ಕಳೆದ ಎಂಟು ದಿನಗಳಿಂದ ನಡೆದ ಶೋಧ ಕಾರ್ಯಗಳಲ್ಲಿ ಸಿಕ್ಕಿದ್ದ ವಿಡಿಯೋ, ಫೋಟೋ ಹಾಗೂ ಅಸ್ತಿಪಂಜರದ ಪತ್ತೆಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ಸಂಬಂಧ ತಜ್ಞರ ಅಭಿಪ್ರಾಯ ಪಡೆಯುವ ಪ್ರಕ್ರಿಯೆಯೂ ಆರಂಭವಾಗಿದೆ.
ಮಧ್ಯಾಹ್ನದ ಹೊತ್ತಿನಲ್ಲಿ ಅಡಿಶನಲ್ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಅವರು ತಹಶೀಲ್ದಾರ್ ಕಚೇರಿಯಿಂದ ನೇರವಾಗಿ ಎಸ್‌ಐಟಿ ಕಚೇರಿಗೆ ತೆರಳದೆ, ಮೂರು ಗಂಟೆಗಳ ಕಾಲ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲ ಕಡತಗಳ ವಿಲೇವಾರಿ ಹಾಗೂ ಇತರ ಮಹತ್ವದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳ ನಿರೀಕ್ಷೆಯಿದ್ದು, ಮುಂದಿನ ದಿನಗಳಲ್ಲಿ ತಜ್ಞರ ಅಭಿಪ್ರಾಯದ ಆಧಾರದ ಮೇಲೆ ತನಿಖೆಗೆ ಹೊಸ ದಿಕ್ಕು ಸಿಗುವ ಸಾಧ್ಯತೆಯಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…