Latest

ಧರ್ಮಸ್ಥಳ ಶವ ಹೂತು ಪ್ರಕರಣ: SIT ತನಿಖೆಗೆ ತಮಿಳುನಾಡು ಕಾರ್ಮಿಕರ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ವೇಗಗೊಳಿಸಿದೆ. ಅನಾಮಿಕ ದೂರುದಾರನ ನೀಡಿದ ಮಾಹಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ SIT, ಅವನೊಂದಿಗೆ ಹಿಂದೆ ಕೆಲಸ ಮಾಡಿದವರ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದೆ.

ತನಿಖೆಯ ಭಾಗವಾಗಿ ತಮಿಳುನಾಡಿನ ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಜೊತೆಗೆ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದಲೂ ಹಲವರನ್ನು ಹಾಜರುಪಡಿಸಿ, 1995ರಿಂದ 2014ರ ಅವಧಿಯಲ್ಲಿ ದೂರುದಾರನೊಂದಿಗೆ ಕಾರ್ಯನಿರ್ವಹಿಸಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿ ಪಡೆದು ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.

ಸ್ಪಾಟ್ ನಂ. 13ರಲ್ಲಿ ನೆಲದಡಿಯ ಸ್ಥಿತಿಯನ್ನು ತಿಳಿಯಲು SIT ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನ ಬಳಸಲು ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ ಈ ಯಂತ್ರವನ್ನು ಖಾಸಗಿ ಕಂಪನಿಯಿಂದ ಬಾಡಿಗೆಗೆ ಪಡೆಯಲಾಗುತ್ತಿದ್ದು, ದಿನಕ್ಕೆ ಲಕ್ಷಾಂತರ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಒಟ್ಟಾರೆ ₹20 ಲಕ್ಷದಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮಳೆಯ ಕಾರಣದಿಂದ ನೆಲ ಒದ್ದೆಯಾದರೆ GPR ಸಿಗ್ನಲ್ ದುರ್ಬಲವಾಗುವ ಆತಂಕ ತನಿಖಾಧಿಕಾರಿಗಳಲ್ಲಿದೆ.

ಬೆಳ್ತಂಗಡಿಯಲ್ಲಿ ಇರುವ SIT ಕಚೇರಿಯನ್ನು ಅಧಿಕೃತವಾಗಿ “SIT ಪೊಲೀಸ್ ಠಾಣೆ”ಯಾಗಿ ಪರಿವರ್ತಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ, ಇನ್ನುಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಠಾಣೆಯಲ್ಲಿ ದಾಖಲಿಸಬಹುದು. ಇದಕ್ಕೂ ಮೊದಲು ದೂರುಗಳನ್ನು ಸ್ಥಳೀಯ ಠಾಣೆಯಲ್ಲಿ ದಾಖಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಹೊಸ ಕ್ರಮದಿಂದ ದೂರು ಪ್ರಕ್ರಿಯೆ ಸುಗಮವಾಗಿದೆ.

ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರ ತನ್ನ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದ್ದರಿಂದ, SIT ಅವನಿಗೆ ತಕ್ಷಣವೇ ಭದ್ರತೆ ಒದಗಿಸಿದೆ. ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ದೂರುದಾರನಿಗೆ ಪೊಲೀಸ್ ಎಸ್ಕಾರ್ಟ್ ಮತ್ತು ಇಬ್ಬರು ಸಿಬ್ಬಂದಿಗಳ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚಿನ ಧರ್ಮಸ್ಥಳ ಗಲಾಟೆಯ ಹಿನ್ನೆಲೆಯಲ್ಲಿ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ನಿರ್ದಿಷ್ಟ ಕಾರ್ಯಾಚರಣೆಯನ್ನು ಪ್ರಸ್ತುತ ಮುಂದೂಡಲಾಗಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago