Latest

ಧರ್ಮಸ್ಥಳ ಸರಣಿ ಕೊಲೆ: 39 ವರ್ಷಗಳ ಹಿಂದಿನ ಪದ್ಮಲತಾ ಪ್ರಕರಣಕ್ಕೆ ಎಸ್‌ಐಟಿ ತನಿಖೆಯಿಂದ ಹೊಸ ಬೆಳಕು”

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಭಯಾನಕ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ತನಿಖೆಗೆ ಹೊಸ ತಿರುವು ಸಿಕ್ಕಿದ್ದು, ಈ ಹಿಂದೆ ಸಿಐಡಿ ತಿರಸ್ಕರಿಸಿದ ಪದ್ಮಲತಾ ಪ್ರಕರಣ ಮತ್ತೆ ಚರ್ಚೆಯ ಕೇಂದ್ರವಾಗಿದೆ.

ಇತ್ತೀಚೆಗೆ, ಧರ್ಮಸ್ಥಳದ ಸುತ್ತಮುತ್ತ ಹಲವಾರು ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಒಂದು ವ್ಯಕ್ತಿ ಈ ಎಲ್ಲ ಪ್ರಕರಣಗಳ ಬಗ್ಗೆ ನಿಖರ ಮಾಹಿತಿಯೊಂದಿಗೆ ಎಫ್‌ಐಆರ್‌ ದಾಖಲಿಸಿದ್ದಾನೆ. ತನಿಖಾಧಿಕಾರಿಗಳ ಮುಂದೆ ತಾನೇ ಕೆಲ ಹೆಣಗಳನ್ನು ಹೂತುಬಿಟ್ಟಿರುವುದಾಗಿ ಹೇಳಿದ ಆತ, ಅಸ್ತಿಪಂಜರಗಳ ಸ್ಥಳಗಳನ್ನು ತೋರಿಸಲು ಸಿದ್ಧ ಎಂದು ಈ ಹೇಳಿಕೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿ ವಿಶೇಷ ತನಿಖಾ ತಂಡ (SIT) ರಚಿಸಿದೆ.

ಈ ಹೊಸ ಬೆಳವಣಿಗೆಯ ನಡುವೆ 39 ವರ್ಷಗಳ ಹಿಂದಿನ ಪದ್ಮಲತಾ ಪ್ರಕರಣ ಮತ್ತೆ ದೃಷ್ಟಿಗೆ ಬಂದಿದೆ. 1986ರ ಡಿಸೆಂಬರ್ 22ರಂದು ಬೋಳಿಯಾರು ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪದ್ಮಲತಾ, ಕಮ್ಯೂನಿಸ್ಟ್ ಪಕ್ಷದ ಪ್ರಮುಖ ಮುಖಂಡರ ಮಗಳಾಗಿದ್ದರು. ಕೆಲ ದಿನಗಳ ನಂತರ, ಅವಳ ಅಸ್ತಿಪಂಜರ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಈ ಕುರಿತು ಸಾಕಷ್ಟು ಅನುಮಾನಗಳು ಮೂಡಿದ್ದವು. ಆದರೆ, ಕಾಲಕ್ರಮೇಣ ತನಿಖೆ ನಿಧಾನವಾಗಿ ಮುಸುಕಿಬಿದ್ದು,

ಈಗ ಎಸ್‌ಐಟಿ ತಂಡ ಹೊಸ ಉತ್ಸಾಹದಿಂದ ತನಿಖೆ ಆರಂಭಿಸಿರುವ ಹಿನ್ನಲೆಯಲ್ಲಿ ಪದ್ಮಲತಾ ಕುಟುಂಬ ಈ ದೀರ್ಘಕಾಲದ ನ್ಯಾಯದ ನಿರೀಕ್ಷೆಗೆ ಪರಿಹಾರ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದೆ. ಈ ಪ್ರಕರಣದ ನಿಜ ಮತ್ತು ಸತ್ಯಾಂಶ ಹೊರಬಂದು, ದೋಷಿಗಳು ಕಾನೂನಿನ ಮುಂದೆ ನಿಲ್ಲುತ್ತಾರೆ ಎಂಬ ವಿಶ್ವಾಸ ಸ್ಥಳೀಯರಲ್ಲಿ ಉಂಟಾಗಿದೆ.

 

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

3 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

16 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

17 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago