Latest

ಧರ್ಮಸ್ಥಳ: ಬೆಳ್ತಂಗಡಿಯಲ್ಲಿ ಎಸ್‌ಐಟಿ ತನಿಖಾ ಕಚೇರಿ ಸ್ಥಾಪನೆ.!

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಕರಣದ ತನಿಖೆ ಈಗ ವಿಶೇಷ ತನಿಖಾ ತಂಡದ (SIT) ಕೈಗೆ ಹೋಗಿದೆ. ರಾಜ್ಯ ಸರ್ಕಾರದಿಂದಲೇ ವಿಶೇಷ ಆದೇಶ ಹೊರಡಿಸಿ ಈ ಎಸ್‌ಐಟಿ ತಂಡವನ್ನು ರಚಿಸಲಾಗಿದ್ದು, ತನಿಖೆಗೆ ವೇಗ ನೀಡಲು ಬೆಳ್ತಂಗಡಿಯಲ್ಲಿ ವಿಶೇಷ ಕಚೇರಿಯನ್ನು ಸ್ಥಾಪಿಸಲಾಗುತ್ತಿದೆ.

ತಕ್ಷಣಿಕ ಕ್ರಮವಾಗಿ, ಎಸ್‌ಐಟಿ ಅಧಿಕಾರಿಗಳ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಕರಣದ ಮೂಲ ತನಿಖೆಗೆ ಅನುಕೂಲವಾಗುವಂತೆ ಬೆಳ್ತಂಗಡಿ ಪಟ್ಟಣದ ಪೊಲೀಸ್ ಠಾಣೆ ಸಮೀಪದ ನೂತನ ಪೊಲೀಸ್ ಕ್ವಾಟರ್ಸ್‌ಗಳಲ್ಲಿ ಈ ಕಚೇರಿ ಆರಂಭಗೊಳ್ಳಲಿದೆ.

ಎಸ್‌ಐಟಿ ರಚನೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರಿಂದ ಸರಕಾರಕ್ಕೆ ಸಲ್ಲಿಸಲಾದ ಶಿಫಾರಸುಪತ್ರ ಪ್ರಮುಖ ಆಧಾರವಾಗಿದೆ. ಈ ಪತ್ರದಲ್ಲಿ ತೀವ್ರವಾಗಿ ಉಲ್ಲೇಖಿಸಲಾದ ಅಂಶಗಳು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025, ಬಾರತ್ ನ್ಯುಸಂಹಿತೆಯ (BNS) ಸೆಕ್ಷನ್ 211(ಎ) ಹಾಗೂ ಇತರೆ ವಿಧಾನದಡಿ ದಾಖಲಾಗಿರುವ ಪ್ರಕರಣದ ತಾತ್ವಿಕತೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರವು ಎಸ್‌ಐಟಿ ರಚನೆಗೆ ತೀರ್ಮಾನಿಸಿದೆ.

ಪ್ರಕರಣದ ತನಿಖೆಗೆ ಇದೊಂದು ತಿರುವು ಬದಲಾಯಿಸುವ ಹಂತವೆನಿಸಿದ್ದು, ಧರ್ಮಸ್ಥಳದಲ್ಲಿ ನಡೆದ ಘಟನೆಯ ಸಂಪೂರ್ಣ ಸತ್ಯಾಂಶ ಹೊರತೆಗೆದು, ನ್ಯಾಯ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ತನಿಖಾ ಕ್ರಮ ಕೈಗೊಳ್ಳಲಾಗಿದೆ. ಇದೀಗ ಎಸ್‌ಐಟಿ ತಂಡದಿಂದ ಸಂಪೂರ್ಣ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಸಂಬಂಧಿತ ಎಲ್ಲಾ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ನಿರೀಕ್ಷೆ ಇದೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

1 hour ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

14 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago