ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಹಳ್ಳಿಗಳ ಜನರು ಹೆದ್ದಾರಿ ಬಂದ್ ಮಾಡಿದ್ದು ಕಾರಣವಾಗಿದೆ. ಹನಕೆರೆ ಸಮೀಪ ಅಂಡರ್‌ಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೊಂದರೆ ಆಗಲಿದೆ ಎಂದಿದ್ದಾರೆ. ಇದಕ್ಕೆಲದಕ್ಕೂ ಕಾರಣ ಗ್ರಾಮದಿಂದ ಸುಮಾರು 200 ಮೀಟರ್ ದೂರದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗುತ್ತಿರುವುದು. ಗ್ರಾಮದ ಹೊರವಲಯದಲ್ಲಿ ಅಂಡರ್‌ಪಾಸ್ ಇರುವುದರಿಂದ ಸರಗಳ್ಳತನ, ದರೋಡೆ ಪ್ರಕರಣಗಳು ನಡೆಯುವ ಬಗ್ಗೆ ಆತಂಕಗೊಂಡಿರುವ ಗ್ರಾಮಸ್ಥರು ಸಂಜೆ ಹಾಗೂ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.
ಭರವಸೆ ಕೊಟ್ಟು ಕಾಮಗಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು. ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮಸ್ಥರು, ವಿದ್ಯಾರ್ಥಿನಿಯರು, ಮಹಿಳೆಯರಿಗೆ ಓಡಾಡಲು ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಮಾಡು ವರೆಗೂ ಬಂದ್ ಹಿಂಪಡೆಯಲ್ಲವೆಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಸದ್ಯ ಜನರು ಹೆದ್ದಾರಿಯಲ್ಲಿಯೇ ಶಾಮಿಯಾನ ಹಾಕಿ ಧರಣಿ ಕುಳಿತಿದ್ದು ಗ್ರಾಮಸ್ಥರಿಗೆ ರೈತ ಸಂಘವೂ ಸಾಥ್ ನೀಡಿದೆ. ಇದರಿಂದಾಗಿ ಕಿಲೋಮೀಟರ್ಗಟ್ಟಲೇ ಸಾಲುಗಟ್ಟಿ ವಾಹನಗಳು ನಿಂತಿವೆ. ಪ್ರತಿಭಟನಾಕಾರರಿಂದಾಗಿ ಬೇಸತ್ತ ಪ್ರಯಾಣಿಕರು ಅವರೊಂದಿಗೆ ವಾಗ್ವಾದ ಮಾಡಿದ್ದಾರೆ. ಪ್ರತಿಭಟನಾಕಾರರ ಜತೆ ಮಹಿಳೆಯೊಬ್ಬರು ವಾಗ್ವಾದಕ್ಕೆ ಇಳಿದಿದ್ದು ರಸ್ತೆಯಲ್ಲಿ ಹೋಗಲು ಬಿಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ಆಕೆಯ ಮನವೊಲಿಸಲು ಪ್ರತಿಭಾಟನಾಕಾರರು ‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಜನರ ಅನುಕೂಲಕ್ಕಾಗಿ ಈ ಪ್ರತಿಭಟನೆ’ ಎಂದಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ‘ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಡಿಸೆಂಬರ್‌ನಲ್ಲೇ ಮನವಿ ಸಲ್ಲಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಕೆಲಸ ಆರಂಭಿಸಲಾಗುವುದು’ ಎಂದಿದ್ದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಪತ್ರವನ್ನು ಎಂಜಿನಿಯರ್ ತೋರಿಸಿದ್ದಾರೆ. ಎಂಜಿನಿಯರ್ ತಂದಿದ್ದ ಪತ್ರವನ್ನು ಹರಿದ ಪ್ರತಿಭಟನಾಕಾರರು ‘ಹಲವು ತಿಂಗಳಿನಿಂದಲೂ ಇದೇ ಕಾರಣ ಕೊಡುತ್ತಾ ಬಂದಿದ್ದೀರಿ. ಈಗಲೂ ಹಳೆ ಲೆಟರ್ ಹಿಡಿದು ಬಂದಿದ್ದೀರಿ, ಈ ಪತ್ರಕ್ಕೆ ಯಾವುದೇ ಮಹತ್ವ ಇಲ್ಲ. ತತಕ್ಷಣ ಅಂಡರ್ ಪಾಸ್ ನಿರ್ಮಾಣ ಆರಂಭಿಸಿ. ನಿಮಗೆ ಯಾವುದೇ ಕಿರೀಟ ಹಾಕಿಲ್ಲ, ನೀವು ಜನಸೇವಕರು. ಅಹಂಕಾರ ಬಿಟ್ಟು ಕೆಲಸ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಎಂಜಿನಿಯರ್ಗೆ ತಾಕೀತು ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…