ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಧಾರವಾಡ-ಕಲಘಟಗಿ ರಸ್ತೆಯ ಮಧ್ಯೆ ಇರುವ ಯರಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು 33 ಎಕರೆ ಜಮೀನಿದ್ದು, ಅದರಲ್ಲಿ 13 ಎಕರೆ ಭೂಮಿ ಖರಾಬು ಜಮೀನಾಗಿತ್ತು ಎನ್ನಲಾಗಿದೆ. ಈ ಖರಾಬು ಜಮೀನಿನ ದಾಖಲೆಗಳನ್ನು ಮಾರ್ಪಾಡು ಮಾಡಿಕೊಡಲು ತಹಶೀಲ್ದಾರ್ 50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಇದೇ ಜಮೀನಿನ ಪೈಕಿ 2 ಎಕರೆ ಭೂಮಿಯನ್ನು ತಮ್ಮದಾಗಿಸಿಕೊಳ್ಳಲು ತಹಶೀಲ್ದಾರ್ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಕರ್ನಾಟಕ ಕಾಲೇಜು ಆವರಣದಲ್ಲಿ ಲೋಕಾಯುಕ್ತ ಕಾರ್ಯಾಚರಣೆ
ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಎಂಬುವವರು ಧಾರವಾಡದ ಯರಿಕೊಪ್ಪ ಹದ್ದಿನಲ್ಲಿ ಖರೀದಿಸಿದ್ದ ಜಮೀನಿನ ಖರಾಬು ಪಹಣಿ ಸರಿಪಡಿಸಿಕೊಡುವಂತೆ ತಹಶೀಲ್ದಾರ್ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ದಾಖಲೆ ತಿದ್ದುಪಡಿಗಾಗಿ 50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ.
ದೂರು ಆಧರಿಸಿ ಕಾರ್ಯಾಚರಣೆಗೆ ಮುಂದಾದ ಲೋಕಾಯುಕ್ತ ಅಧಿಕಾರಿಗಳು, ಬುಧವಾರ ರಾತ್ರಿ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಚ್ಚಿದಾನಂದ ಕುಚನೂರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್‌ಪಿ ರವೀಂದ್ರ ಕುರುಬಗಟ್ಟಿ, ಇನ್ಸ್‌ಪೆಕ್ಟರ್‌ಗಳಾದ ಪ್ರಸಾದ್, ಕರುಣೇಶಗೌಡ, ಪ್ರಸಾದ ಪಾನೇಕರ್ ಸೇರಿದಂತೆ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಸದ್ಯ ತಹಶೀಲ್ದಾರ್ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ, ಅನ್ನ ಸಂತರ್ಪಣೆಗೆ ಸಿದ್ಧತೆ
ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರು ತಮ್ಮ ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಆಯೋಜಿಸಿದ್ದರು ಎನ್ನಲಾಗಿದೆ. ಪೂಜೆಯ ಅಂಗವಾಗಿ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.
ಅನ್ನ ಸಂತರ್ಪಣೆಗಾಗಿ ಕಚೇರಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ರಾತ್ರಿ ಅಡುಗೆ ತಯಾರಿಸಲು ಬಾಣಸಿಗರನ್ನು ಕರೆಸಲಾಗಿತ್ತು. ಸುಮಾರು ಎರಡು ಸಾವಿರ ಜನರಿಗೆ ಊಟ ಸಿದ್ಧಪಡಿಸುವ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಇದೀಗ ಭೂ ದಾಖಲೆ ತಿದ್ದುಪಡಿಗೆ 50 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದಲ್ಲಿ ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿರುವುದು ಧಾರವಾಡದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿದಿದೆ.
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…
ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ…
ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ…