Categories: CrimeLatest

ಪ್ರಿಯಕರನೊಂದಿಗೆ ಮೊಬೈಲ್‌ನಲ್ಲಿ ಮಾತುಕತೆ ವೇಳೆ ಮಗುವಿನ ಅಳು ಅಡ್ಡಿ? ನೀಚ ಕೆಲಸಕ್ಕೆ ಮುಂದಾಗೇ ಬಿಟ್ಟಳು ಕ್ರೂರಿ ತಾಯಿ..!

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಲದೇವ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಲಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಆರೋಪದಡಿ ಮಹಿಳೆಯೊಬ್ಬಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಜೂನ್ 28ರಂದು ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಮಾಧವ್ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ರೂಚಿ ಗುಪ್ತಾ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಮಗು ಅಳುತ್ತಿದ್ದುದರಿಂದ ಆಕ್ರೋಶಗೊಂಡು ಕುತ್ತಿಗೆ ಒತ್ತಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಮಗು ಎಚ್ಚರವಾಗುತ್ತಿಲ್ಲ ಎಂದು ಪತಿಗೆ ತಿಳಿಸಿದ್ದು, ಆತ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಸಾವಿನ ಹಿಂದಿನ ನಿಜಾಂಶ ತಿಳಿಯದ ಕುಟುಂಬಸ್ಥರು ಮಗುವಿನ ಅಂತ್ಯಕ್ರಿಯೆಯನ್ನೂ ನೆರವೇರಿಸಿದ್ದರು.

ಘಟನೆ ನಡೆದ ಸುಮಾರು ಒಂದು ತಿಂಗಳ ಬಳಿಕ, ಮಗುವಿನ ಸಾವಿಗೆ ತಾನೇ ಕಾರಣ ಎಂದು ರೂಚಿ ಗುಪ್ತಾ ತನ್ನ ಪತಿಗೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಕುಟುಂಬದವರು ಜುಲೈ 27ರಂದು ಡಯಲ್-112ಗೆ ಕರೆ ಮಾಡಿ ದೂರು ನೀಡಿದ್ದು, ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಎಲ್ಲಾ ಆಯಾಮಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮಗುವಿನ ಸಾವು ಉದ್ದೇಶಪೂರ್ವಕ ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ತನಿಖೆಯ ಮೂಲಕ ದೃಢಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

3 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

3 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…

4 days ago