Latest

ಚಿಂಚೋಡಿಯಲ್ಲಿ ಅಭಿವೃದ್ಧಿ ಕಾಮಗಾರಿ ಲೆಕ್ಕಪತ್ರದಲ್ಲಿ ವ್ಯತ್ಯಾಸ: ಇಬ್ಬರು ಪಿಡಿಓ ಅಮಾನತು

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಂಚೋಡಿಯಲ್ಲಿ ಸರ್ಕಾರಿ ಹಣದ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅಮಾನತುಗೊಂಡವರು ಚಿಂಚೋಡಿ ಗ್ರಾಮ ಪಂಚಾಯತ್ ಪಿಡಿಒ ಶಿವರಾಜ್ ಮತ್ತು ಲಿಂಗಸಗೂರಿನ ಕೋಠಾ ಗ್ರಾಮ ಪಂಚಾಯತ್ ಪಿಡಿಒ ಗಂಗಮ್ಮ. ಈ ಕುರಿತು ರಾಯಚೂರು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪದವಿಯಲ್ಲಿ ಕೈಗೆತ್ತಿಕೊಳ್ಳಬೇಕಾದ ಕರ್ತವ್ಯದಲ್ಲಿ ಲೋಪ ಹಾಗೂ ಹಣಕಾಸು ಲೆಕ್ಕಪತ್ರಗಳಲ್ಲಿ ಅನಿಯಮಿತತೆ ಉಂಟಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 15ನೇ ಹಣಕಾಸು ಆಯೋಗದ ಯೋಜನೆ ಅಡಿಯಲ್ಲಿ ₹26,71,303 ಮೊತ್ತದ ದುರುಪಯೋಗ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಿವರಾಜ್ ಅವರು ಮಾತ್ರವೇ ₹14.77 ಲಕ್ಷ ವೆಚ್ಚದ ಲೆಕ್ಕಪತ್ರಗಳನ್ನು ಸರಿಯಾಗಿ ಸಲ್ಲಿಸದಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ವ್ಯತ್ಯಯ ಕಂಡುಬಂದಿರುವುದರಿಂದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಉದ್ಭವಿಸಿದೆ.

ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ, ಮುಂದಿನ ತನಿಖೆಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿವರಗಳು ಹೊರಬೀಳಬೇಕಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆಯ ನಿಗಾದ ಮೇಲೆ ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago