Politics

ಹೂಡಿಕೆದಾರರಿಗೆ ನಿರಾಸೆ; ಬಜೆಟ್ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆ ಕುಸಿತ.

3.0 ಸರ್ಕಾರದ ಮೊದಲ ಬಜೆಟ್ ಮಂಡನೆ. ಉದ್ಯೋಗ ಸೃಷ್ಟಿ, ತೆರಿಗೆ ಕಡಿತ, ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ, ಕೃಷಿ ಜೊತೆಗೆ ಕೆಲ ಹೊಸ ಯೋಜನೆಗಳ ಘೋಷಣೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭ ಮೇಲಿನ ತೆರಿಗೆಯಿಂದ ಹೂಡಿಕೆದಾರರು ನಿರಾಸೆಗೊಂಡಿದ್ದಾರೆ.
ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭದ ಮೇಲೆ ತೆರಿಗೆಯನ್ನು ಏರಿಕೆ ಮಾಡಲಾಗಿದೆ. ಶೇಕಡಾ 10 ರಿಂದ ಶೇಕಡಾ 12ಕ್ಕೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಂಡವಾಳ ಹೂಡಿಕೆಯ ಲಾಭದ ತೆರಿಗೆ ಹೆಚ್ಚಳದಿಂದ ಹೂಡಿಕೆದಾರರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಷೇರುಮಾರುಕಟ್ಟೆ ಕುಸಿತ ಕಂಡಿದೆ. ಸೆನ್ಸೆಕ್ಸ್ 1,200 ಅಂಕ ಕುಸಿತ ಕಂಡರೆ, ನಿಫ್ಠಿ 350 ಅಂಕ ಕುಸಿತ ಕಂಡಿದೆ.
ಒಂದೆಡೆ ಭಾರತದಲ್ಲಿ ಬಜೆಟ್ ಮಂಡನೆಯಲ್ಲಿ ಹೂಡಿಕೆ ಲಾಭದ ಮೇಲಿನ ತೆರಿಗೆ ಹೆಚ್ಚಳದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡರೆ, ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕುಸಿತ ಕಂಡಿದೆ. ಪ್ರಮುಖವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಸ್ಥಾನದಿಂದ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ತಲ್ಲಣವಾಗಿದೆ. ಬಜೆಟ್ ಮಂಡನೆ ಬೆನ್ನಲ್ಲೇ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಈ ಬಾರಿ ಮೈತ್ರಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ ಕಳೆದೆರಡು ಅವಧಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್ ಮೋದಿ ಸರ್ಕಾರಕ್ಕೆ ಹೆಚ್ಚು ಸವಾಲಾಗಿತ್ತು. ಬೆಂಬಲ ನೀಡಿದ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

5 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

7 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago