Latest

ನಗರಸಭಾ ಆಡಳಿತಕ್ಕೆ ಮುಖಭಂಗ, ಖಾಲಿ ಕುರ್ಚಿಗಳ ಪ್ರದರ್ಶನ

ನಂಜನಗೂಡು: ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ .ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ
ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆಯಾಗಿತ್ತು .
ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ .ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೋ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ
ಪೂರ್ವಾಬಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್,ಸಿದ್ದಿಕ್ಅಹ್ಮದ್,ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ವರದಿ: ಮೋಹನ್

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

14 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago