ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ಧತೆಗಳನ್ನು
ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ, ವಿಡೀಯೋ ಕಾನ್ಸರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.
ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ, ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸೂಚಿಸಿದರು.
ಪ್ರಸ್ತುತ ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು, ಕೆ.ಎಸ್.ಆರ್.ಟಿ.ಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು, ವಸತಿ ಮತ್ತು ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರವಹಿಸಬೇಕು, ಅಕರ್ಷಕ ವೇದಿಕೆ ನಿರ್ಮಾಣ ಮತ್ತು ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರು.
ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ಅಗತ್ಯವಿದ್ದಲ್ಲಿ ಉಪ ಸಮಿತಿಗಳನ್ನು ರಚಿಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಶುಕ್ರವಾರದ ಒಳಗೆ ಎಲ್ಲಾ ಸಮಿತಿಗಳು ಸಭೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಎಲ್ಲಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಹಾಜರಿದ್ದರು.
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…