Latest

ಬನವಾಸಿ ಕದಂಬೋತ್ಸದ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ಧತೆಗಳನ್ನು
ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ, ವಿಡೀಯೋ ಕಾನ್ಸರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.

ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ, ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸೂಚಿಸಿದರು.

ಪ್ರಸ್ತುತ ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು, ಕೆ.ಎಸ್.ಆರ್.ಟಿ.ಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು, ವಸತಿ ಮತ್ತು ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರವಹಿಸಬೇಕು, ಅಕರ್ಷಕ ವೇದಿಕೆ ನಿರ್ಮಾಣ ಮತ್ತು ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರು.

ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ಅಗತ್ಯವಿದ್ದಲ್ಲಿ ಉಪ ಸಮಿತಿಗಳನ್ನು ರಚಿಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಶುಕ್ರವಾರದ ಒಳಗೆ ಎಲ್ಲಾ ಸಮಿತಿಗಳು ಸಭೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಎಲ್ಲಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಹಾಜರಿದ್ದರು.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

9 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

13 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

16 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

21 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago