Latest

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿದರು. ಇದಕ್ಕೆ ವಿರುದ್ಧವಾಗಿ ಇನ್ನೂ ಕೆಲವರು ಪುನರ್ವಸತಿ ಬದಲು ಪರಿಹಾರ ಕೊಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಅಥವಾ ಪರಿಹಾರವಾ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.

ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಿ ಆದದಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವ‌ರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು. ತಳಕೆ ಬೈಲ್ ಭೂಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗ ಬೀಗಾರ-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು.

ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು. ನಂತರ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago