Categories: LatestPolitics

ಡಿಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಸಜ್ಜು: ಸೋಮವಾರ ಪ್ರಮಾಣ ವಚನ, ಹೊಸ ಸಚಿವರ ಪಟ್ಟಿ ಫೈನಲ್?

ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಖಚಿತವಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಮೂಲಗಳ ಪ್ರಕಾರ, ಸೋಮವಾರ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಅಧಿಕೃತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಳಿಕ ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ತಿಳಿದು ಬಂದಿದೆ.

ಡಿಕೆ ಶಿವಕುಮಾರ್ ಜೊತೆಗೆ ಕೆಲ ಹಿರಿಯ ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ಮೂಲಗಳ ಪ್ರಕಾರ ಏಳು ಮಂದಿ ಹಿರಿಯ ನಾಯಕರು ಮೊದಲ ಹಂತದಲ್ಲಿ ಸಂಪುಟ ಸೇರ್ಪಡೆಯಾಗಲಿದ್ದು, ಇನ್ನೂ ಕೆಲವು ಮೂಲಗಳು 12 ರಿಂದ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಿವೆ.

ಸಂಪುಟ ಸೇರ್ಪಡೆ ಕುರಿತಂತೆ ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಶಿವರಾಜ ತಂಗಡಗಿ, ಕೆ ಎಚ್ ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೆಸರುಗಳು ಕೇಳಿಬರುತ್ತಿವೆ.

ಇದರ ಜೊತೆಗೆ ಡಿಕೆ ಶಿವಕುಮಾರ್ ತಮ್ಮ ಆಪ್ತ ವಲಯದ ಕೆಲ ನಾಯಕರ ಹೆಸರನ್ನೂ ಅಂತಿಮ ಪಟ್ಟಿಯಲ್ಲಿ ಸೇರಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಅನುಮೋದನೆ ನೀಡಿದರೆ 13ಕ್ಕೂ ಹೆಚ್ಚು ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ನಡುವೆ ತೀವ್ರ ಚಟುವಟಿಕೆಗಳು ಆರಂಭವಾಗಿವೆ.

ಇನ್ನೊಂದೆಡೆ, ಹಾಲಿ ಸ್ಪೀಕರ್ ಯುಟಿ ಖಾದರ್ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ. ದಿನೇಶ್ ಗುಂಡೂರಾವ್, ಎಚ್ ಕೆ ಪಾಟೀಲ್ ಅಥವಾ ಡಾ.ಜಿ ಪರಮೇಶ್ವರ್ ಅವರನ್ನು ಮುಂದಿನ ಸ್ಪೀಕರ್ ಆಗಿ ಆಯ್ಕೆ ಮಾಡುವ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಒಟ್ಟಿನಲ್ಲಿ ಸೋಮವಾರ ರಾಜ್ಯ ರಾಜಕೀಯದ ಹಲವು ಕುತೂಹಲಗಳಿಗೆ ತೆರೆ ಬೀಳುವ ನಿರೀಕ್ಷೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ರಾಜ್ಯದ ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಹೋಮ ಹವನಗಳನ್ನು ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago