ಮಂಡ್ಯ, ಜುಲೈ 19: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನವೊಂದು ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ–ಟಿಎಂ ಹೂಸೂರು ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿಕೊಂಡು ಉಪಮುಖ್ಯಮಂತ್ರಿಯವರ ಕಾಫಿಲಾ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಬೆಂಗಾವಲಿನಲ್ಲಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಯಾವುದೇ ರೀತಿಯ ಅಪಾಯವಾಗಿಲ್ಲ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…