ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ನಡೆದ ಮಹತ್ವದ ಸಭೆಗೆ ಗೈರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ 3 ಉಪಾಧ್ಯಕ್ಷರು ಹಾಗೂ 29 ಪ್ರಧಾನ ಕಾರ್ಯದರ್ಶಿಗಳನ್ನು ಹುದ್ದೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೇ 24ರಂದು ಬೆಂಗಳೂರಿನ ಹೊರವಲಯದಲ್ಲಿ ಎಸ್‌ಐಆರ್ ಪ್ರಕ್ರಿಯೆ, ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತು ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಆದರೆ, ಹಲವು ಪ್ರಮುಖ ಪದಾಧಿಕಾರಿಗಳು ಸಭೆಗೆ ಗೈರಾಗಿದ್ದ ಹಿನ್ನೆಲೆ ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.
ವಜಾಗೊಂಡ ಉಪಾಧ್ಯಕ್ಷರಲ್ಲಿ ದಾವಣಗೆರೆಯ ಕೆ. ಶಿವಮೂರ್ತಿ, ಕಲಬುರಗಿಯ ಬಾಬುರಾವ್ ಜಗೀರ್ದಾರ್ ಹಾಗೂ ಬೆಂಗಳೂರಿನ ಎಂಸಿ ವೇಣುಗೋಪಾಲ್ ಸೇರಿದ್ದಾರೆ.
ಇದೇ ವೇಳೆ ಪ್ರಧಾನ ಕಾರ್ಯದರ್ಶಿಗಳಾದ ನಿಕೇತ್ ರಾಜ್ ಮೌರ್ಯ, ನಟಿ ಭಾವನಾ ರಾಮಣ್ಣ, ಕೆಸಿ ಪ್ರಭಾಕರ್ ರೆಡ್ಡಿ, ತಿಬ್ಬೇಗೌಡ, ಜುಲ್ಫಿಕರ್ ಅಹ್ಮದ್, ಶಂಕರ್ ದೊಡ್ಡಿ, ರೇಖಾ ಹುಲಿಯಪ್ಪ, ಎಚ್ಎ ಷಣ್ಮುಗಪ್ಪ, ಎಂ ರಾಮಪ್ಪ, ಷಣ್ಮುಗಪ್ಪ ಶಿವಳ್ಳಿ, ಸಿಆರ್ ಮನೋಹರ್, ಎಚ್ಆರ್ ಶ್ರೀನಾಥ್, ನಾಗೇಶ್ವರ್ ರಾವ್ ಸೇರಿದಂತೆ ಒಟ್ಟು 29 ಮಂದಿಯನ್ನು ಹುದ್ದೆಯಿಂದ ತೆರವುಗೊಳಿಸಲಾಗಿದೆ.
ಪಕ್ಷದ ಸಭೆಗೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದರು. ಅವರ ಸೂಚನೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಮಹತ್ವದ ಕ್ರಮ ಜರುಗಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಒಳಾಂಗಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಸ್ತು ಕ್ರಮಗಳ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…