Latest

ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ತಮಿಳುನಾಡಿನ ನಿರುದ್ಯೋಗಿಯೋರ್ವ
ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್​​ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ?
ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್​​​ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್​​ ರೂಮ್​ಗೆ​ ಕರೆ ಮಾಡಿದ್ದಾನೆ. ಬಾಂಬ್​​ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ.
ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago