Latest

ಡಾಕ್ಟರ್ ಮದ್ಯದ ಅಮಲಿನಲ್ಲಿ ಡ್ಯೂಟಿಗೆ ಹಾಜರ್.! : ರೋಗಿಯ ಕುಟುಂಬದವರ ಆಕ್ರೋಶ.

ಸವದತ್ತಿ (ಬೆಳಗಾವಿ ಜಿಲ್ಲೆ): ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ರೋಗಿ ತಪಾಸಣೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಬೆಳಕಿಗೆ ಬಂದಿದೆ. ಡಾ. ಸುರೇಶ್ ಹಿತ್ತಲಮನಿ ಎಂಬ ವೈದ್ಯ ಎಣ್ಣೆ ಕುಡಿದು ಡ್ಯೂಟಿಗೆ ಬಂದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಂದರ ಪರೀಕ್ಷೆ ನಡೆಸಿರುವ ಆರೋಪ ಕೇಳಿ ಬಂದಿದೆ.

ವೈದ್ಯನ ಅಸಭ್ಯ ನಡವಳಿಕೆಯಿಂದ ಅಸಹನೆಯಾದ ರೋಗಿಯ ಕುಟುಂಬದವರು ಈ ತಕ್ಷಣ ವೈದ್ಯನ ತಪಾಸನೆ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ ವೈದ್ಯ ಅವರ ಮಾತಿಗೆ ಕಿವಿಯೊಡ್ಡದೇ ತುರಟತನದಿಂದ ರೋಗಿಯನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಎದ್ದು ನಿಲ್ಲಲಾಗದಷ್ಟರ ಮಟ್ಟಿಗೆ ಟೈಟಾಗಿ ಇದ್ದ ವೈದ್ಯ, ಕಣ್ಣು ಕಣ್ಣಿಗೆ ಬೀಳದಂತೆ ತೇಲಾಡುತ್ತಲೇ ರೋಗಿಯನ್ನು ನೋಡಿದ್ದಾರೆ.

ಈ ಅಸಾಧಾರಣ ಘಟನೆಯ ವೇಳೆ ರೋಗಿಯ ಸಂಬಂಧಿಕರು ವೈದ್ಯನ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿ, ಮಾತನಾಡಿ ತೀರ್ಥಿಸಿ, ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಆಸ್ಪತ್ರೆಯ ನರ್ಸ್ ಮಧ್ಯಪ್ರವೇಶ ಮಾಡಿ ರೋಗಿಯನ್ನು ತಾನೇ ತಪಾಸಿಸುತ್ತೇನೆ ಎಂದು ಮುಂದಾಗಿದ್ದಾರೆ.

ಸ್ಥಳೀಯರು ಮತ್ತು ರೋಗಿಗಳು ನೀಡಿದ ಮಾಹಿತಿಯ ಪ್ರಕಾರ, ಡಾ. ಸುರೇಶ್ ಹಿತ್ತಲಮನಿ ಈ ಹಿಂದೆಯೂ ಅನೇಕ ಬಾರಿ ಮದ್ಯಪಾನದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದು ರೋಗಿಗಳನ್ನು ಪರೀಕ್ಷಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಿತ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂಬ ದೂರಿವೆ. ಆದರೆ ಈ ತನಕ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಮರ್ಪಕ ತನಿಖೆ ಹಾಗೂ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago