ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್‌ಗಳನ್ನು ವೈದ್ಯರ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಘೋಷಿಸಿದೆ.
ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಡ್ರಗ್ಸ್ ನಿಯಮಾವಳಿಗಳು-1945ಕ್ಕೆ ತಿದ್ದುಪಡಿ ತರಲಾಗಿದೆ. ಈ ಹೊಸ ನಿಯಮಗಳನ್ನು ‘ಡ್ರಗ್ಸ್ (ಐದನೇ ತಿದ್ದುಪಡಿ) ನಿಯಮಗಳು, 2026’ ಎಂದು ಹೆಸರಿಸಲಾಗಿದೆ.
ತಿದ್ದುಪಡಿಯ ಪ್ರಕಾರ, ಡ್ರಗ್ಸ್ ನಿಯಮಾವಳಿಗಳ ಷೆಡ್ಯೂಲ್-ಕೆ (Schedule K) ಅಡಿಯಲ್ಲಿ ನೀಡಲಾಗಿದ್ದ ವಿನಾಯಿತಿ ಪಟ್ಟಿಯಿಂದ ‘ಸಿರಪ್ಸ್’ (Syrups) ಎಂಬ ಪದವನ್ನು ಕೈಬಿಡಲಾಗಿದೆ. ಇದರಿಂದ ಸಿರಪ್‌ಗಳ ಮುಕ್ತ ಮಾರಾಟಕ್ಕೆ ಇದ್ದ ಅವಕಾಶ ಕೊನೆಗೊಂಡಿದೆ.
ಹೊಸ ನಿಯಮದ ಅನ್ವಯ, ಸಾರ್ವಜನಿಕರು ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ಸಿರಪ್ ಖರೀದಿಸಬೇಕಾದರೆ ವೈದ್ಯರು ನೀಡಿದ ಅಧಿಕೃತ ಪ್ರಿಸ್ಕ್ರಿಪ್ಷನ್ ತೋರಿಸುವುದು ಕಡ್ಡಾಯವಾಗುತ್ತದೆ. ಇನ್ನು ಮುಂದೆ ಇಂತಹ ಔಷಧಿಗಳನ್ನು ಮೆಡಿಕಲ್ ಅಂಗಡಿಗಳಲ್ಲಿ ನೇರವಾಗಿ ಅಥವಾ ಓವರ್ ದಿ ಕೌಂಟರ್ (OTC) ಮೂಲಕ ಪಡೆಯಲು ಸಾಧ್ಯವಾಗುವುದಿಲ್ಲ.
ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದಲೇ ಈ ನಿಯಮ ಜಾರಿಗೆ ಬರಲಿದ್ದು, ಜಂಟಿ ಕಾರ್ಯದರ್ಶಿ ಹರ್ಷ್ ಮಂಗ್ಲಾ ಸಹಿ ಮಾಡಿರುವ ಅಧಿಸೂಚನೆಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.
ಸಿರಪ್‌ಗಳ ಅತಿಯಾದ ಬಳಕೆ ಹಾಗೂ ದುರ್ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೊಸ ನಿಯಮದಿಂದ ಔಷಧಿಗಳ ಬಳಕೆಯಲ್ಲಿ ಹೆಚ್ಚಿನ ನಿಯಂತ್ರಣ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಸಾಧ್ಯವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…