Latest

ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂಬ ಆರೋಪ: ಆಕ್ರೋಶಗೊಂಡ ಕುಟುಂಬಸ್ಥರಿಂದ ಆಸ್ಪತ್ರೆಯ ಆಂಬುಲೆನ್ಸ್‌ ಜಖಂಗೊಳಿಕೆ

ರಾಯಚೂರಿನ ಸಿಂಧನೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬ ಆರೋಪದ ಮಧ್ಯೆ ಆಕ್ರೋಶಗೊಂಡ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್‌ಗೆ ಹಾನಿ ಮಾಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಸಿದ್ದಮ್ಮ (23) ಎಂಬ ಯುವತಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ ಸಿಂಧನೂರಿನ ಶರಣಬಸವೇಶ್ವರ ಖಾಸಗಿ ಹೆರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯೆ ಡಾ. ಸೌಮ್ಯಾ ಗುಂಡಳ್ಳಿ ಚಿಕಿತ್ಸೆ ನೀಡಿದ ನಂತರ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಹೆರಿಗೆ ಬಳಿಕ ಸಿದ್ದಮ್ಮನ ಆರೋಗ್ಯ ಸಮರ್ಪಕವಾಗಿತ್ತು ಎಂದು ಹೇಳಿದ ವೈದ್ಯರು ಅವರನ್ನು ಮನೆಗೆ ಕಳುಹಿಸಿದರು.

ಆದರೆ, ಮನೆಗೆ ತಲುಪಿದ ಕೆಲವೇ ಗಂಟೆಗಳಲ್ಲಿ ಸಿದ್ದಮ್ಮಗೆ ತೀವ್ರ ರಕ್ತಸ್ರಾವ ಸಂಭವಿಸಿತು. ಕುಟುಂಬಸ್ಥರು ತಕ್ಷಣವೇ ಅವರನ್ನು ಮರಳಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ರಕ್ತಸ್ರಾವ ತೀವ್ರಗೊಂಡ ಕಾರಣದಿಂದ ಅವರು ಅಸುನೀಗಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಇನ್ನೊಂದು ಆಸ್ಪತ್ರೆಗೆ ಕಳುಹಿಸಿದರೂ, ಅಲ್ಲಿ ಅವರನ್ನು ಮೃತ ಘೋಷಿಸಲಾಯಿತು.

ಇದರಿಂದ ಕೋಪಗೊಂಡ ಕುಟುಂಬಸ್ಥರು ಆಸ್ಪತ್ರೆಯ ಆಂಬುಲೆನ್ಸ್‌ ಮೇಲೆ ಕಲ್ಲು ತೂರಿ ಜಖಂಗೊಳಿಸಿದ್ದಾರೆ. ಜೊತೆಗೆ, ಆಸ್ಪತ್ರೆಯಿಂದ ಹೊರಡುತ್ತಿದ್ದ ವೈದ್ಯೆಯ ತಂದೆಯ ಕಾರಿನ ಮೇಲೆಯೂ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿಬಂದಿದೆ.

ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಡಾ. ಅಮರೇಶ ಪಾಟೀಲ, ಸಿಪಿಐ ಬಾಲಚಂದ್ರ ಲಕ್ಕಂ, ಪಿಎಸ್‌ಐ ಮುದ್ದುರಂಗಸ್ವಾಮಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡರು.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago