Categories: CinemaLatest

“ಅಪ್ಪ-ಅಮ್ಮ ಜೊತೆಯಾಗಿರಲು ಆಗದಿದ್ದರೆ ಮಕ್ಕಳು ಮಾಡಿಕೊಳ್ಳಬೇಡಿ”: ಬಾಲ್ಯದ ನೋವು ಹಂಚಿಕೊಂಡ ಸಾತ್ವಿಕಾ ರಾವ್

ನಿರ್ದೇಶಕ ಓಂ ಪ್ರಕಾಶ್ ರಾವ್ ಹಾಗೂ ಹಿರಿಯ ನಟಿ ರೇಖಾ ದಾಸ್ ಅವರ ಪುತ್ರಿ ಶ್ರಾವ್ಯಾ ರಾವ್, ಇದೀಗ ಸಾತ್ವಿಕಾ ರಾವ್ ಎಂಬ ಹೆಸರಿನಲ್ಲಿ ಚಿತ್ರರಂಗದಲ್ಲಿ ಹೊಸ ಆರಂಭ ಮಾಡಿದ್ದಾರೆ. ಈ ಹಿಂದೆ ನಾಯಕಿಯಾಗಿ ಕೆಲ ಚಿತ್ರಗಳಲ್ಲಿ ನಟಿಸಿದ್ದರೂ ನಿರೀಕ್ಷಿತ ಯಶಸ್ಸು ಸಿಗದ ಕಾರಣ ಹೆಸರು ಬದಲಿಸಿಕೊಂಡಿರುವ ಅವರು, ಇತ್ತೀಚೆಗೆ ಬಿಡುಗಡೆಯಾದ ‘ಮೋಡ ಕವಿದ ವಾತಾವರಣ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಇತ್ತೀಚೆಗೆ SumanTV Kannada ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸಾತ್ವಿಕಾ ತಮ್ಮ ಬಾಲ್ಯದ ಕಹಿ ಅನುಭವಗಳನ್ನು ಮನಮುಟ್ಟುವಂತೆ ಹಂಚಿಕೊಂಡಿದ್ದಾರೆ. ಪೋಷಕರ ವಿಚ್ಛೇದನದಿಂದ ತಾವು ಅನುಭವಿಸಿದ ಮಾನಸಿಕ ನೋವು ಇನ್ನೂ ಮರೆಯಲಾಗಿಲ್ಲ ಎಂದು ಅವರು ಭಾವುಕರಾಗಿ ಹೇಳಿದ್ದಾರೆ.

ಸಾತ್ವಿಕಾ ಹುಟ್ಟಿದ ಕೆಲವೇ ದಿನಗಳಲ್ಲಿ ಓಂ ಪ್ರಕಾಶ್ ರಾವ್ ಮತ್ತು ರೇಖಾ ದಾಸ್ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದರು. ಬಾಲ್ಯದ ಕೆಲವು ವರ್ಷ ತಂದೆಯೊಂದಿಗೆ ಕಳೆದ ಸಾತ್ವಿಕಾ, ನಂತರ ತಂದೆಯ ಎರಡನೇ ಮದುವೆಯನ್ನೂ ನೋಡಬೇಕಾಯಿತು. ಈ ಎಲ್ಲ ಬೆಳವಣಿಗೆಗಳು ತಮ್ಮ ಮನಸ್ಸಿನ ಮೇಲೆ ಆಳವಾದ ಗಾಯ ಬೀರಿದ್ದವು ಎಂದು ಅವರು ಹೇಳಿದ್ದಾರೆ.

“ಚಿಕ್ಕವಳಾಗಿದ್ದಾಗ ಯಾಕೆ ಅಪ್ಪನ ಮನೆ, ಯಾಕೆ ಅಮ್ಮನ ಮನೆ ಎಂದು ಅರ್ಥವಾಗುತ್ತಿರಲಿಲ್ಲ. ಇಬ್ಬರೂ ಜೊತೆಯಾಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುವುದೇ ಕಷ್ಟವಾಗಿತ್ತು. ಅದು ನನ್ನ ಜೀವನದ ಮೊದಲ ಹಾರ್ಟ್ ಬ್ರೇಕ್,” ಎಂದು ಸಾತ್ವಿಕಾ ನೆನಪಿಸಿಕೊಂಡಿದ್ದಾರೆ.

ಇದೇ ವೇಳೆ ಪೋಷಕರಿಗೆ ಅವರು ಭಾವನಾತ್ಮಕ ಮನವಿ ಮಾಡಿದ್ದಾರೆ. “ಒಟ್ಟಿಗೆ ಬದುಕಲು ಸಾಧ್ಯವಿಲ್ಲ ಅಂದ್ರೆ ದಯವಿಟ್ಟು ಮಕ್ಕಳು ಮಾಡಿಕೊಳ್ಳಬೇಡಿ. ನಿಮ್ಮಿಬ್ಬರ ನಡುವಿನ ಸಮಸ್ಯೆಗಳಿಗಿಂತ ಮಕ್ಕಳ ಮನಸ್ಸಿನ ಮೇಲೆ ಆಗುವ ಪರಿಣಾಮ ಬಹಳ ದೊಡ್ಡದು. ಆ ಟ್ರಾಮಾ ಜೀವನಪೂರ್ತಿ ಕಾಡುತ್ತದೆ,” ಎಂದು ಹೇಳಿದ್ದಾರೆ.

ತಂದೆ ಮತ್ತು ತಾಯಿ ಇಬ್ಬರ ಮೇಲೂ ಸಮಾನ ಪ್ರೀತಿ ಇದ್ದ ಕಾರಣ, ಇಬ್ಬರ ನಡುವೆ ಸಿಲುಕಿಕೊಂಡ ಸ್ಥಿತಿ ತಮ್ಮನ್ನು ತುಂಬಾ ಕಾಡುತ್ತಿತ್ತು ಎಂದು ಸಾತ್ವಿಕಾ ವಿವರಿಸಿದ್ದಾರೆ. “15 ದಿನ ಅಪ್ಪನ ಮನೆ, 15 ದಿನ ಅಮ್ಮನ ಮನೆ… ಅದರ ಮಧ್ಯೆ ಶಾಲೆ, ಓದು, ಪರೀಕ್ಷೆ. ಯಾರ ಬಳಿ ನನ್ನ ನೋವು ಹೇಳಿಕೊಳ್ಳಬೇಕು ಎಂಬುದೇ ಗೊತ್ತಿರಲಿಲ್ಲ. ತುಂಬಾ ಅಳುತ್ತಿದ್ದೆ,” ಎಂದು ಅವರು ಹೇಳಿದ್ದಾರೆ.

ತಂದೆಯ ಎರಡನೇ ಮದುವೆಯ ನಂತರದ ಪರಿಸ್ಥಿತಿಯೂ ತಮ್ಮ ಮೇಲೆ ಪರಿಣಾಮ ಬೀರಿತ್ತು ಎಂದು ಹೇಳಿದ ಸಾತ್ವಿಕಾ, “ಅವರು ಯಾರು, ಯಾಕೆ ನನ್ನೊಂದಿಗೆ ಮಾತನಾಡುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿರಲಿಲ್ಲ. ಆ ಸಮಯದಲ್ಲಿ ತುಂಬಾ ಗೊಂದಲ ಮತ್ತು ನೋವು ಅನುಭವಿಸಿದ್ದೆ,” ಎಂದು ತಿಳಿಸಿದ್ದಾರೆ.

ಕೊನೆಯಲ್ಲಿ, ಇಂದಿನ ಪೋಷಕರು ಮಕ್ಕಳ ಭಾವನೆಗಳನ್ನು ಹೆಚ್ಚು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿರುವ ಸಾತ್ವಿಕಾ, ವಿಚ್ಛೇದನದ ನಿರ್ಧಾರವು ಮಕ್ಕಳ ಜೀವನದ ಮೇಲೆ ಉಂಟುಮಾಡುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago