Latest

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

23 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago