ರಾಜಧಾನಿ ಬೆಂಗಳೂರಿನ ಪೀಣ್ಯಾ ಎಚ್‌ಎಂಟಿ ಲೇಔಟ್‌ನಲ್ಲಿ ಅಪ್ರಾಪ್ತ ಬಾಲಕನಿಂದ ನಡೆದ ಡಬಲ್ ಮರ್ಡರ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೇ ಈ ದುರ್ಘಟನೆಗೆ ಕಾರಣವಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮಲ್ಲೇಗೌಡ ಎಂಬಾತನೊಂದಿಗೆ ಛಾಯಾ ಎಂಬ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಪ್ರಶ್ನಿಸಲು ಮಲ್ಲೇಗೌಡನ ಪತ್ನಿ ನಯನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಛಾಯಾ ಮನೆಗೆ ತೆರಳಿದ್ದರು.
ಈ ವೇಳೆ ಮನೆಯಲ್ಲಿ ಛಾಯಾ ಮಗನೊಂದಿಗೆ ನಯನಾ ಮತ್ತು ಸುದೀಪ್ ನಡುವೆ ವಾಗ್ವಾದ ಉಂಟಾಗಿದೆ. ಗಲಾಟೆ ತೀವ್ರಗೊಂಡಾಗ, ತಾಯಿಯನ್ನು ನಿಂದಿಸಿದ್ದಕ್ಕೆ ಆಕ್ರೋಶಗೊಂಡ ಅಪ್ರಾಪ್ತ ಬಾಲಕ ಮಚ್ಚಿನಿಂದ ಹಲ್ಲೆ ನಡೆಸಿ ಇಬ್ಬರನ್ನೂ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ನಾಗೇಶ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆ ಅಪ್ರಾಪ್ತ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚುತ್ತಿರುವುದಕ್ಕೆ ಆತಂಕಕಾರಿ ಉದಾಹರಣೆಯಾಗಿದೆ. ಪುಸ್ತಕ ಹಿಡಿಯಬೇಕಾದ ವಯಸ್ಸಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಸಮಾಜದ ದಿಕ್ಕಿನ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೆ ಏರುತ್ತಿದ್ದು ಬಡವರು,ಮಧ್ಯಮ ವರ್ಗದವರು ಕೊಂಡುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಬಂಗಾರದ ಬೆಲೆ ಬಂದು ನಿಂತಿದೆ.ಇದನ್ನೇ…
ಗಾಂಜಾ ವ್ಯಸನ ಮತ್ತು ಹಣದ ವಿಚಾರಕ್ಕೆ ಸಂಬಂಧಿಸಿದ ಭೀಕರ ಕೊಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್…
ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಗಳ ನಡುವಿನ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ತನ್ನ ತಂಗಿಯೊಂದಿಗೆ ಅಕ್ರಮ…
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ…
ಪೋಷಕರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ 6 ವರ್ಷದ ವಯೋಮಿತಿಯಲ್ಲಿ…
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಸುಮಾರು 4000 ಬೋಧಕ…