ಪತ್ನಿಯ ಶೀಲದ ಕುರಿತು ಅನುಮಾನ ವ್ಯಕ್ತಪಡಿಸಿ ಗಂಡನು ಮಚ್ಚಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
26 ವರ್ಷದ ತೇಜಸ್ವಿನಿಯನ್ನು ಆಕೆಯ ಗಂಡ ದೇವರಾಜು ಹತ್ಯೆ ಮಾಡಿದ್ದು, ಈ ದಂಪತಿಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ನಂತರ ಇಬ್ಬರು ಮಕ್ಕಳು ಇದ್ದರು.
ತೋಟದ ಮನೆಯಲ್ಲಿ ವಾಸಿಸುತ್ತಿದ್ದ ಈ ದಂಪತಿಯ ನಡುವೆ ಸಾಕಷ್ಟು ಕಾಲದಿಂದ ಜಗಳ ನಡೆಯುತ್ತಿತ್ತು. ಪತ್ನಿಯ ಮೇಲೆ ಸದಾ ಅನುಮಾನ ಹೊಂದಿದ್ದ ದೇವರಾಜು, ರಾತ್ರಿ ಅವಳ ಮೇಲೆ ಮಚ್ಚಿನಿಂದ ದಾಳಿ ಮಾಡಿ ಹತ್ಯೆ ನಡೆಸಿದ್ದಾನೆ.
ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ದೇವರಾಜು ಅವರನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್, ಅಡಿಷನಲ್ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ಗೋಪಾಲಕೃಷ್ಣ, ಮತ್ತು ಸಿಪಿಐ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…