Categories: CinemaLatest

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯೂಸ್ 18 ಜೊತೆ ಮಾತನಾಡಿದ ಸುಂದರ್ ರಾಜ್, ಡಾ. ರಾಜ್‌ಕುಮಾರ್ ಅವರಿಗೆ ಸರಿಸಾಟಿಯಾದ ಕಲಾವಿದ ಈ ಜಗತ್ತಿನಲ್ಲಿ ಇಲ್ಲ ಎಂದು ಅಭಿಪ್ರಾಯಪಟ್ಟರು. ‘ನಟ ಸಾರ್ವಭೌಮ’ ಎಂಬ ಬಿರುದನ್ನು ಪಡೆದಿದ್ದ ಅಣ್ಣಾವ್ರನ್ನು ರಾಜಕೀಯಕ್ಕೆ ಬರಲು ಹಲವು ಬಾರಿ ಆಹ್ವಾನಿಸಲಾಯಿತಾದರೂ, ಅವರು “ನಾನು ಕಲಾವಿದನಾಗಿಯೇ ಉಳಿಯುತ್ತೇನೆ” ಎಂದು ಹೇಳಿ ಕನ್ನಡಿಗರ ಹೃದಯದಲ್ಲಿ ಧ್ರುವತಾರೆಯಾಗಿ ಉಳಿದಿದ್ದಾರೆ ಎಂದರು.

ಡಾ. ರಾಜ್‌ಕುಮಾರ್ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿದ ಮಹಾನ್ ವ್ಯಕ್ತಿ. ಅವರಿಗೆ ಕರ್ನಾಟಕದಲ್ಲಿ ಎಲ್ಲಿಯಾದರೂ ಭೂಮಿ ನೀಡಬಹುದು. ಎರಡು ಎಕರೆಯಲ್ಲ, ಸಾವಿರಾರು ಎಕರೆ ಭೂಮಿ ಕೊಟ್ಟರೂ ತಪ್ಪಿಲ್ಲ. ಅವರಿಗಾಗಿ ಭೂಮಿ ಯಾಕೆ ಕೊಡಬೇಕು ಎಂದು ಪ್ರಶ್ನಿಸುವ ಅಗತ್ಯವೇ ಇಲ್ಲ ಎಂದು ಸುಂದರ್ ರಾಜ್ ಹೇಳಿದ್ದಾರೆ.

ಈ ನಡುವೆ, ವಾಣಿಜ್ಯ ಮಂಡಳಿ ಸೋಮವಾರ ಸಭೆ ನಡೆಸಿ ನಟ ಚೇತನ್ ಅವರಿಗೆ ನೋಟಿಸ್ ನೀಡುವ ಕುರಿತು ಚರ್ಚಿಸಲಿದೆ ಎಂದು ತಿಳಿದುಬಂದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೂಡ ಸೂಚನೆ ನೀಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಚೇತನ್ ಅಹಿಂಸಾ, ತಮ್ಮ ಹೇಳಿಕೆ ಡಾ. ರಾಜ್‌ಕುಮಾರ್ ಅವರ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಅಮೇರಿಕಾದಲ್ಲಿದ್ದಾಗಲೂ ಅವರ ಸಿನಿಮಾಗಳನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ” ಎಂದಿದ್ದಾರೆ.

ಆದರೆ, ಸರ್ಕಾರ ಅವರ ಹೆಸರಿನಲ್ಲಿ ಭೂಮಿ ನೀಡಿರುವ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದೇನೆ ಅಷ್ಟೇ ಎಂದು ಅವರು ತಿಳಿಸಿದ್ದಾರೆ. “ಚಿತ್ರರಂಗದಲ್ಲಿ ಪುಟ್ಟಣ್ಣ ಕಣಗಾಲ್, ನಂಜುಂಡಸ್ವಾಮಿ, ಬಿ. ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಈ ರೀತಿಯ ಗೌರವ ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಡಾ. ರಾಜ್‌ಕುಮಾರ್ ಅವರ ಸ್ಮಾರಕವನ್ನು ಗಾಜನೂರಿನಲ್ಲಿ ನಿರ್ಮಿಸಬಹುದಿತ್ತು, ಆದರೆ ನಗರ ಮಧ್ಯಭಾಗದಲ್ಲಿ ನಿರ್ಮಿಸಿರುವುದು ಸರ್ಕಾರದ ನಿರ್ಧಾರ. ಸಿಟಿ ಸೆಂಟರ್‌ನಲ್ಲಿ ಭೂಮಿ ನೀಡುವ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಅವರು ಹೇಳಿದ್ದಾರೆ.

“ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲ. ಆದರೆ ಸರ್ಕಾರವು ಈ ರೀತಿಯ ನಿರ್ಧಾರಗಳಿಂದ ಲಾಭ ಪಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತುತ್ತಿದ್ದೇನೆ. ರಾಜ್ಯಕ್ಕೆ ಹಲವರು ಕೊಡುಗೆ ನೀಡಿದ್ದಾರೆ. ಎಲ್ಲರಿಗೂ ಸಮಾನ ಗೌರವ ಸಿಗಬೇಕು” ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲೂ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago