Crime

“ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: ಲಂಚಕ್ಕೆ ಡಿಮ್ಯಾಂಡ್, ಠಾಣೆಯಲ್ಲಿ ಹಲ್ಲೆ – ಪೊಲೀಸರ ವಿರುದ್ಧ ಗಂಭೀರ ಆರೋಪ!”

ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ವೇಳೆ ಪೊಲೀಸರು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೊಂದು ಮಾಡಲಾಗಿದೆ. ವಾಹನ ಸವಾರನೊಬ್ಬ, ಪೊಲೀಸ್ ಅಧಿಕಾರಿಗಳು ₹3 ಸಾವಿರ ಲಂಚಕ್ಕೆ ಒತ್ತಾಯಿಸಿದರು, ನಗದು ಕೊಡಲು ಸಾಧ್ಯವಿಲ್ಲ, ಗೂಗಲ್ ಪೇ ಮಾಡುತ್ತೇನೆ ಎಂದಾಗ ನಿರಾಕರಿಸಿದರು ಎಂದು ದೂರು ನೀಡಿದ್ದಾರೆ.

ಲಂಚದ ಬೇಡಿಕೆ ಆರೋಪ

ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು, ಅದನ್ನು ಕೋರ್ಟ್‌ನಲ್ಲಿ ಪಾವತಿಸಬೇಕು ಎಂಬ ನಿಯಮವಿದೆ. ಆದರೆ, ವಿಜಯನಗರ ಸಂಚಾರಿ ಠಾಣೆ ಪೊಲೀಸರು ನೇರವಾಗಿ ಹಣ ಕೇಳಿದರಂತೆ. ಈಶ್ವರ್ ಎಂಬ ಬೈಕ್ ಸವಾರನ ಪ್ರಕಾರ, ಮಾರ್ಚ್ 14ರ ರಾತ್ರಿ ಜಿಟಿ ಮಾಲ್ ಬಳಿ ಪೊಲೀಸರು ತಪಾಸಣೆ ಮಾಡುತ್ತಿದ್ದರು. ಆರ್‌ಎಕ್ಸ್ ಬೈಕ್‌ನಲ್ಲಿ ಮದ್ಯ ಸೇವಿಸಿ ಬರುತ್ತಿದ್ದ ಈಶ್ವರ್ ಅವರನ್ನು ತಡೆದು, “₹10 ಸಾವಿರ ದಂಡ ಆಗುತ್ತದೆ, ₹3 ಸಾವಿರ ನೀಡಿದರೆ ಬಿಟ್ಟುಕೊಡುತ್ತೇವೆ” ಎಂದು ತಿಳಿಸಿದ್ದರಂತೆ.

ಈಶ್ವರ್ ನಗದು ಇಲ್ಲವೆಂದು ಗೂಗಲ್ ಪೇ ಮಾಡಲು ಯತ್ನಿಸಿದಾಗ, ಪೊಲೀಸರು ಕೇವಲ ನಗದು ಬೇಕು ಎಂದು ಒತ್ತಾಯಿಸಿದ್ರಂತೆ. ಈಶ್ವರ್ ಕೋರ್ಟ್‌ನಲ್ಲಿ ಪೂರ್ಣ ದಂಡ ಪಾವತಿಸುತ್ತೇನೆ ಎಂದಾಗ, ಅವರ ಬೈಕ್ ಅನ್ನು ಠಾಣೆಗೆ ವಾಪಸು ತೆಗೆದುಕೊಂಡು ಹೋಗಿದ್ದಾರೆ.

ಠಾಣೆಯಲ್ಲಿ ಹಲ್ಲೆ ಆರೋಪ

ಮಾರ್ಚ್ 15ರಂದು ಕೋರ್ಟ್‌ನಲ್ಲಿ ₹13 ಸಾವಿರ ದಂಡ ಪಾವತಿಸಿದ ಈಶ್ವರ್, ಮಾರ್ಚ್ 16ರಂದು ತನ್ನ ಸ್ನೇಹಿತನೊಂದಿಗೆ ಬೈಕ್ ವಾಪಸು ಪಡೆಯಲು ವಿಜಯನಗರ ಸಂಚಾರಿ ಪೊಲೀಸ್ ಠಾಣೆಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ, ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿದ್ರಂತೆ.

ಆಸ್ಪತ್ರೆಯಿಂದ ವಿಡಿಯೋ ಮೂಲಕ ದೂರು
ಈಶ್ವರ್ ಹಲ್ಲೆಯ ಬಗ್ಗೆ ವಿಡಿಯೋ ಮಾಡಿದ್ದು, “ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟ್ ನಿಂದ ಒದ್ದಿದ್ದಾರೆ. ಹಲ್ಲೆಯಿಂದ ನಾನು ಅಸ್ವಸ್ಥನಾಗಿದ್ದೆ, ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ” ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯಿಂದ ತನಿಖೆ

ಈ ಪ್ರಕರಣ ಸಂಬಂಧ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ ಹದ್ದಣ್ಣನವರ್ ಅವರು ವರದಿ ಕೇಳಿದ್ದಾರೆ. ಎಸಿಪಿ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

43 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago