Categories: CrimeLatest

ಅಕ್ರಮ ಮದ್ಯದೊಂದಿಗೆ ಸಿಕ್ಕಿಬಿದ್ದ ಚಾಲಕ; ಕೇರಳ ಮೂಲದ ವ್ಯಕ್ತಿ ವಶಕ್ಕೆ

ಕಾರವಾರ: ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ರಸ್ತೆಗಾವಲು ಕರ್ತವ್ಯದಲ್ಲಿದ್ದ ಸಿಬ್ಬಂದಿ ವಾಹನ ತಪಾಸಣೆ ನಡೆಸಿದ ವೇಳೆ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಪರವಾನಗಿ ಇಲ್ಲದೆ ವಿವಿಧ ಬ್ರಾಂಡ್‌ನ 1,296 ಲೀಟರ್ (150 ಬಾಕ್ಸ್) ಮದ್ಯವನ್ನು ಮಂಗಳೂರು ಕಡೆಗೆ ಸಾಗಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ.

ಈ ಪ್ರಕರಣದಲ್ಲಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ಮನ್ಸೂರ್ ಮುಹಮ್ಮದ್ (32) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಮದ್ಯದ ಮೌಲ್ಯ ಸುಮಾರು ₹9 ಲಕ್ಷವಾಗಿದ್ದು, ವಾಹನದ ಮೌಲ್ಯ ಸುಮಾರು ₹8 ಲಕ್ಷ ಎಂದು ಅಂದಾಜಿಸಲಾಗಿದೆ. ಒಟ್ಟು ₹17 ಲಕ್ಷ ಮೌಲ್ಯದ ಸೊತ್ತನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದೆ.

ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮಂಗಳೂರು ವಿಭಾಗದ ನಿರ್ದೇಶನದಂತೆ ಹಾಗೂ ಅಬಕಾರಿ ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ ಕಾರವಾರ ಮತ್ತು ಅಬಕಾರಿ ಉಪ ಅಧೀಕ್ಷಕರು, ಕಾರವಾರ ಉಪ ವಿಭಾಗದ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು, ಮದ್ಯ ಹಾಗೂ ವಾಹನವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆ-1965ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

10 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

11 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago