ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಪಿಂಜಾರ್ ಹೆಗ್ಡಾಳ್ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಕೆಕೆಆರ್‌ಟಿಸಿ ಬಸ್ ಅಪಘಾತಕ್ಕೀಡಾದರೂ, ದೊಡ್ಡ ಅನಾಹುತವನ್ನು ಚಾಲಕನ ಸಮಯಪ್ರಜ್ಞೆ ತಪ್ಪಿಸಿದೆ.
ಪಟ್ಟಣದಿಂದ ರಾಯಚೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಒಟ್ಟು 16 ಮಂದಿ ಪ್ರಯಾಣಿಕರಿದ್ದರು. ಪ್ರಯಾಣದ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿನತ್ತ ಸಾಗುತ್ತಿದ್ದಾಗ, ಚಾಲಕ ಶಂಕರಲಿಂಗ ಅವರು ತಕ್ಷಣದ ನಿರ್ಧಾರ ತೆಗೆದುಕೊಂಡು ಬಸ್ ಅನ್ನು ಮರಕ್ಕೆ ಡಿಕ್ಕಿ ಹೊಡೆಸಿದರು. ಇದರಿಂದ ಬಸ್ ಮಗುಚಿ ಬೀಳುವ ಅಪಾಯ ತಪ್ಪಿತು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಚಾಲಕ ಶಂಕರಲಿಂಗ ಹಾಗೂ ನಿರ್ವಾಹಕ ಹನುಮಂತಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ನಂತರ ಎಲ್ಲ ಪ್ರಯಾಣಿಕರನ್ನು ಮತ್ತೊಂದು ಬಸ್ ಮೂಲಕ ಗಮ್ಯಸ್ಥಾನಕ್ಕೆ ಕಳುಹಿಸಲಾಗಿದೆ ಎಂದು ಡಿಪೋ ಅಧಿಕಾರಿ ಕೆ. ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…