ಅಸ್ಸಾಂ ರಾಜ್ಯದ ಕಚಾರ್ ಜಿಲ್ಲೆಯಲ್ಲಿ ಮಾದಕವಸ್ತುಗಳ ವಿರುದ್ಧ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ದಾಳಿಯಲ್ಲಿ ಶಂಕಿತ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.‌

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ಕಚಾರ್ ಜಿಲ್ಲೆಯ ಸಿಲ್ದುಬಿ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಸುಮಾರು 3 ಕೋಟಿ ರೂಪಾಯಿ ಮೌಲ್ಯದ 10,000 ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯಾಬಾ ಮಾತ್ರೆಗಳು ಭಾರತದಲ್ಲಿ ಕಾನೂನುಬಾಹಿರವಾಗಿವೆ. ಇದರೊಳಗಿನ ಮೆಥಾಂಫೆಟಮೈನ್ ಎಂಬ ಸಕ್ರಿಯ ರಾಸಾಯನಿಕವು ನಿಷಿದ್ಧ ವಸ್ತುಗಳ ಪಟ್ಟಿಯಲ್ಲಿದೆ, ಮತ್ತು ಇದರ ಬಳಕೆ ಹಾಗೂ ವ್ಯಾಪಾರವು ಮಾದಕವಸ್ತು ನಿಯಂತ್ರಣ ಕಾಯ್ದೆಯಡಿ ಅಪರಾಧವಾಗಿದೆ.

ಅಸ್ಸಾಂ ಪೊಲೀಸರು ಮಾದಕವಸ್ತುಗಳ ವಿರುದ್ಧ ನಡೆಯುತ್ತಿರುವ ಈ ಹೋರಾಟವನ್ನು ಮುಂದುವರಿಸಿದ್ದು, ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇತ್ತೀಚಿನ ದಾಳಿ ಮಹತ್ವಪೂರ್ಣ ಬೆಳವಣಿಗೆ ಎನ್ನಬಹುದು.

ಮುಖ್ಯಮಂತ್ರಿ ಶರ್ಮಾ, “ರಾಜ್ಯದಲ್ಲಿ ಮಾದಕವಸ್ತುಗಳ ಬೇರು ಕಿತ್ತುಹಾಕಲು ನಿರಂತರವಾಗಿ ಕಾರ್ಯಾಚರಣೆಗಳನ್ನು ಮುಂದುವರಿಸುತ್ತೇವೆ,” ಎಂದು ಸ್ಪಷ್ಟಪಡಿಸಿದ್ದಾರೆ.

error: Content is protected !!