Latest

ಧಾರವಾಡದಲ್ಲಿ ಕುಡಿದ ಮತ್ತಿನಲ್ಲಿ ಆಟೋ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನಿಯಂತ್ರಣ ತಪ್ಪಿಸಿ ಪಾದಚಾರಿ ಮಾರ್ಗದ ಮೇಲೆ ಆಟೋ ಹರಿಸಿ, ನಂತರ ಪಲ್ಟಿ ಮಾಡಿದ್ದಾನೆ. ಈ ದುರ್ಘಟನೆಯಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

ಕಲಂದರ್ ಎಂಬಾತನು ಅಪಘಾತಕ್ಕೀಡಾದ ಚಾಲಕನೆಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿ ಆಟೋ ಚಲಾಯಿಸುತ್ತಿದ್ದ ಈತನ ಆಟೋ ಹೊಯ್ಸಳ ಹೋಟೆಲ್ ಎದುರುಗಡೆ ಪ್ಲಾಟ್‌ಫಾರ್ಮ್ ಮೇಲೆ ಹತ್ತಿ ಬಿದ್ದಿದೆ. ಈ ವೇಳೆ ಆಟೋ ಪಲ್ಟಿಯಾದ ಪರಿಣಾಮ ಕಲಂದರ್ ತಲೆಗೆ ಭಾರಿ ಗಾಯವಾಗಿದೆ ಮತ್ತು ರಕ್ತಸ್ರಾವವೂ ಆಗಿದೆ.

ಘಟನೆ ಸಂಭವಿಸಿದ ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದರೂ, ಆತನ ಜೇಬಿನಿಂದ ಬಿದ್ದ ದೊಡ್ಡ ಚಾಕು ನೋಡಿ ಕೆಲ ಕಾಲ ಹಿಂಜರಿದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವರದಿ: ಶಿವು ಪಿ.ಆರ್.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago