Latest

ಕುಡಿದ ಮತ್ತಿನಲ್ಲಿ ಕಾರು ಚಾಲಕನ ಹುಚ್ಚಾಟ.. ! ದ್ವಿಚಕ್ರ ವಾಹನಗಳಿಗೆ ಡಿಕ್ಕಿ: ಒಂದೇ ಕುಟುಂಬದ ಮೂವರು ದುರ್ಮರಣ..!

ನಂಜನಗೂಡು:ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766 ರ ಡೇಂಜರ್ ಜೋನ್ ಎಂದೇ ಹೇಳುವ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಕಾರು ಚಾಲಕ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಪರಿಣಾಮ ಚಲಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ದ್ವಿಚಕ್ರವಾಹನದ ಮೂವರು ಮಂದಿ ಸ್ಥಳದಲ್ಲಿಯೇ ಸಾವನಪ್ಪಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ .ನಂಜನಗೂಡು ತಾಲೂಕಿನ ಕೂಡ್ಲಾ ಪುರ ಗ್ರಾಮದ ಶಶಿಧರ(23) ಪತ್ನಿ ಶಾಲಿನಿ( 20) ಹಾಗೂ ಶಶಿಧರನ ತಾಯಿ ಭಾಗ್ಯಮ್ಮ( 40) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು ಹಾಗೂ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ .
ಘಟನೆಯ ವಿವರ
ನಂಜನಗೂಡು ತಾಲೂಕು ಕೂಡ್ಲಾಪುರ ಗ್ರಾಮದ ಮೃತ ಮಹಿಳೆ ಭಾಗ್ಯಮ್ಮ ಎಂಬುವರ ಮಗ ಶಶಿಧರ ಮತ್ತು ಸೊಸೆ ಶಾಲಿನಿ ಜೊತೆ ಮದುವೆಯಾಗಿ ಒಂದು ವರ್ಷ ಕಳೆದರೂ ಮಕ್ಕಳಾಗದ ಕಾರಣ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ವರ ಪಡೆಯುವ ಸಲುವಾಗಿ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಎರಡು ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತೆರಳಿದ್ದರು. ದೇವರ ದರ್ಶನ ಪಡೆದು ಮತ್ತೆ ಗ್ರಾಮದತ್ತ ಬರುವಾಗ ಬೇಗೂರು ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಹಿರಿಕಾಟಿ ಗ್ರಾಮದ ಗೇಟ್ ಬಳಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ KA 10 M 5127 ನಂಬರ್ ಪ್ಲೇಟ್ ಹೊಂದಿರುವ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಓರ್ವನ ಸ್ಥಿತಿ ಗಂಭೀರವಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಘಟಕ ಚಿಕಿತ್ಸೆಗೆ ರವಾನಿಸಲಾಗಿದೆ.
ಮೂವರನ್ನು ಬಲಿ ಪಡೆದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಬೇಗೂರು ಪೊಲೀಸರು ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಚಾಲಕನ ಶೋಧನೆಗೆ ಮುಂದಾಗಿದ್ದಾರೆ. ವರದಿ: ಮೋಹನ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago