Latest

ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್; ಸೈಬರ್ ಸೆಂಟರ್ ಮಾಲೀಕ ಅಂದರ್!

ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್​ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್​ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್​ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್​ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್​ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 hour ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 hour ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 hour ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 hour ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

1 hour ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

1 hour ago