Latest

ಬಂಗಾರಪೇಟೆ ಪೊಲೀಸರ ತನಿಖೆ ವೇಳೆ 2,50,000/- ಬೆಲೆ ಬಾಳುವ 4 ದ್ವಿಚಕ್ರ ವಾಹನ ವಶಕ್ಕೆ ಇಬ್ಬರು ಆರೋಪಿಗಳ ಬಂಧನ.

ಬಂಗಾರಪೇಟೆ: ದಿನಾಂಕ:17.02.2025 ರಂದು ಮದ್ಯಾಹ್ನ 2.30 ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಪಿ.ಎಸ್.ಐ. ರಾಜಣ್ಣ ಮತ್ತು ಅಪರಾಧ ಪತ್ತೆ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ನಾಗೇಶ್.ಎಂ ಹೆಚ್‌, ವೆಂಕಟೇಶ್, ಚಲಪತಿ ರವರೊಂದಿಗೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಐ.ಎಂ.ವಿ ಕೇಸುಗಳನ್ನು ದಾಖಲಿಸುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಒಂದು ಟಿ.ವಿ.ಎಸ್ ವಿಕ್ಟರ್ ದ್ವಿಚಕ್ರ ವಾಹನದಲ್ಲಿ ಬಂದಾಗ ಸಿಬ್ಬಂದಿಯವರು ಅವರನ್ನು ತಡೆದು ನಿಲ್ಲಿಸಿ ಹೆಸರು ವಿಳಾಸ ವಿಚಾರಿಸಿದಾಗ ಮುಕ್ತಿಯಾರ್ ಪಾಷ, ಸಿ ರಹೀಂ ಕಾಂಪೌಂಡ್ ಬಂಗಾರಪೇಟೆ, ಇಮ್ರಾನ್, ಕಾರಹಳ್ಳಿ ಬಂಗಾರಪೇಟೆ ನಿವಾಸಿಗಳೆಂದು ತಿಳಿಸಿದ್ದಾರೆ. ಅವರ ಬಳಿ ಇದ್ದ ದ್ವಿಚಕ್ರ ವಾಹನ ಸಂಖ್ಯೆ ಕೆ.ಎ 08 ಜೆ 2317 ವಾಹನದ ದಾಖಲಾತಿಗಳನ್ನು ಕೇಳಲಾಗಿ ಯಾವುದೇ ದಾಖಲಾತಿಗಳನ್ನು ತೋರಿಸಿದ ಕಾರಣ. ಈ ಇಬ್ಬರು ಆಸಾಮಿಗಳು ವಾಹನವನ್ನು ಕಳವು ಮಾಡಿರಬಹುದು ಎಂಬ ಅನುಮಾನದ ಮೇರೆಗೆ ಪಿ.ಐ ದಯಾನಂದ್ ರವರ ಸೂಚನೆ ಮೇರೆಗೆ ಈ ಇಬ್ಬರ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊ.ಸಂ. 43/2025 ಕಲಂ 35(1)(ಇ)106 ಬಿ.ಎನ್.ಎಸ್.ಎಸ್ ರಜೋ 303(2) ಬಿ.ಎನ್.ಎಸ್ ರೀತ್ಯ ಕೇಸು ದಾಖಲಿಸಿ, ಪ್ರಕಾಶ್ ನರಸಿಂಗ್ ಪಿ.ಎಸ್.ಐ , ಪಾಂಡುರಂಗ ಡಿ.ವೈ.ಎಸ್.ಪಿ ರವರ ಮಾರ್ಗದರ್ಶನದಂತೆ ತನಿಖೆ ಕೈಗೊಂಡು ಬಂಗಾರಪೇಟೆಯ ವಿವಿಧ ಕಡೆ ಕಳವು ಮಾಡಿದ್ದ 2,50,000/-ರೂ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳನ್ನು ಆರೋಪಿತರ ಕಡೆಯಿಂದ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ,

ಬಂಗಾರಪೇಟೆ ಪೊಲೀಸರ ಈ ಕಾರ್ಯಾಚರಣೆಯನ್ನು ಮೆಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಎಂ. ಶಾಂತರಾಜು ಐ.ಪಿ.ಎಸ್ ಅಭಿನಂದಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago