ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ವಯಂ ನಿವೃತ್ತ ಅಬಕಾರಿ ಇಲಾಖೆಯ ಸಿಬ್ಬಂದಿಯಾಗಿರುವ ಯಮುನಾ ಅವರನ್ನು ಇಂದು ಬೆಳಗ್ಗಿನಿಂದಲೇ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

ಬೆಳಿಗ್ಗೆ ಆರಂಭವಾದ ತಪಾಸಣೆ ಹಲವು ಗಂಟೆಗಳ ಕಾಲ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳ ಕ್ರಮದಿಂದ ಸ್ಥಳದಲ್ಲಿ ಕೆಲಕಾಲ ಕುತೂಹಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Related News

error: Content is protected !!