ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.
ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪದಲ್ಲಿರುವ ಮಂಜುನಾಥ್ ಅವರ ನಿವಾಸಕ್ಕೆ ಗೋವಾ ಹಾಗೂ ಬೆಂಗಳೂರು ಮೂಲದ ಇಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ವೈ. ಮಂಜುನಾಥ್ ಅವರು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯರಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಬೇನಾಮಿ ಆಸ್ತಿ ಸಂಪಾದನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ ಸುಮಾರು 5.30 ಗಂಟೆಗೆ ಒಂದೇ ವೇಳೆ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರರಾಗಿರುವ ವೈ. ಮಂಜುನಾಥ್ ವಿರುದ್ಧ ಲಂಚದ ಹಣವನ್ನು ಅಕ್ರಮವಾಗಿ ಹೂಡಿಕೆ ಮಾಡಿರುವುದು ಹಾಗೂ ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಜುನಾಥ್ ಅವರ ಆಪ್ತರು ಹಾಗೂ ಸ್ನೇಹಿತರ ನಿವಾಸಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆದಿದೆ. ಅವರ ಒಡೆತನದ ಹೈಟೆಕ್ ಅಪಾರ್ಟ್‌ಮೆಂಟ್ ಮೇಲೆಯೂ ದಾಳಿ ನಡೆದಿದ್ದು, ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಸ್ವಗ್ರಾಮದ ನಿವಾಸ ಮತ್ತು ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತರ ಮನೆಗಳಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ಬೇನಾಮಿ ಹೆಸರಿನಲ್ಲಿ ನೂರಾರು ಎಕರೆ ಜಮೀನು ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಖರೀದಿಸಿರುವ ಆರೋಪಗಳು ಮಂಜುನಾಥ್ ವಿರುದ್ಧ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರ ಆಪ್ತರ ಮೇಲೆಯೇ ಇಡಿ ದಾಳಿ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…