Latest

ಐಶ್ವರ್ಯಾ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಮನೆಗಳ ಮೇಲೆಇಡಿ ದಾಳಿ: ಚಿನ್ನದ ವಂಚನೆ ಪ್ರಕರಣಕ್ಕೆ ಮತ್ತೊಂದು ತಿರುವು

ಕಳೆದ ಕೆಲವು ತಿಂಗಳಿಂದ ಬಹುಮಟ್ಟಿಗೆ ಗಮನಸೆಳೆದಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಇದೀಗ (ಇಡಿ) ಹೊಸ ತಿರುವು ನೀಡಿದ್ದು, ಇಂದು ಅವರ ಮನೆಗಳಿಗೆ ದಾಳಿ ನಡೆಸಲಾಗಿದೆ. ತಮ್ಮನ್ನು ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಪರಿಚಯಿಸಿ ಮೋಸ ಎಸಗಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ಇದೀಗ ಇಡಿಯ ನಿಗಾ ಸೆಳೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯಾ ಮನೆ ಹಾಗೂ ಬೆಂಗಳೂರಿನ ನಿವಾಸಗಳ ಮೇಲೆ ಈ ದಾಳಿ ನಡೆದಿದೆ. ಇಡಿ ಅಧಿಕಾರಿಗಳು ದಾಖಲೆಗಳು, ಹಣಕಾಸು ವ್ಯವಹಾರಗಳು ಹಾಗೂ ಇತರ ಮಹತ್ವದ ವಿವರಗಳ ಪರಿಶೀಲನೆ ನಡೆಸಿದ್ದಾರೆ.

ಈ ನಡುವೆಯೇ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರ ಮನೆ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆದಿದೆ. ಈ ದಾಳಿಗೆ ಯಾವ ಪ್ರಕರಣದ ಸಂಪರ್ಕವಿದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಐಶ್ವರ್ಯಾ ಗೌಡ ವಿರುದ್ಧ ವನಿತಾ ಎಸ್. ಐತಾಳ್ ಎಂಬ ಚಿನ್ನದ ಅಂಗಡಿ ಮಾಲಕಿ ನೀಡಿರುವ ದೂರಿನ ಪ್ರಕಾರ, ಸುಮಾರು 9.82 ಕೋಟಿ ರೂ. ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನವನ್ನು ವಂಚನೆ ಮೂಲಕ ಕಬಳಿಸಲಾಗಿದೆ. ಐಶ್ವರ್ಯಾ ಗೌಡ ಅವರು ರಾಜಕೀಯ ಸಂಬಂಧಗಳನ್ನು ನಂಬಿಸಿ ಚಿನ್ನ ಪಡೆದಿದ್ದಾರೆ ಎಂಬ ಗಂಭೀರ ಆರೋಪ ದಾಖಲಾಗಿದೆ. ಈ ಬಗ್ಗೆ ಸಾಕ್ಷ್ಯವಾಗಿ ಆಡಿಯೋ ಕ್ಲಿಪಿಂಗ್ ಹಾಗೂ ಇತರ ದಾಖಲೆಗಳು ಪೊಲೀಸರು ಬಳಿ ದಾಖಲಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಕ್ರಿಯ ತನಿಖೆ ಮುಂದುವರೆಸಿದ್ದು, ಮತ್ತಷ್ಟು ರಾಜಕೀಯ ಮುಖಂಡರು ಕೂಡಾ ಇಡಿಯ ತಪಾಸಣೆಯ ದಾರಿಯಲ್ಲಿದ್ದಾರೆ ಎಂಬ ಅಂದಾಜುಗಳು ಹರಡುತ್ತಿದ್ದವೆಯೆಂದು ಮೂಲಗಳು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago