Categories: CrimeLatest

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರಿನಲ್ಲಿ ಮುಳುಗಿ ಸಾವು; ಶಿರಸಿಯಲ್ಲಿ ಇಬ್ಬರು ಸಹೋದರರ ದುರಂತ ಅಂತ್ಯ

ಶಿರಸಿ: ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿಯ ಚಿಕ್ಕ ಡ್ಯಾಂನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಮೂಲತಃ ಹೊನ್ನಾವರ ತಾಲೂಕಿನ ಮಾಸ್ತಿಜಡ್ಡಿಯ ಹರ್ಷಾ ನಾಯ್ಕ (18) ಹಾಗೂ ಅವರ ಸಹೋದರ ಮದನ ನಾಯ್ಕ (16) ಎಂದು ಗುರುತಿಸಲಾಗಿದೆ.

ಹರ್ಷಾ ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮದನ ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

ಭಾನುವಾರ ಮಧ್ಯಾಹ್ನ ಇಬ್ಬರೂ ಮನೆಯ ಸಮೀಪದ ತೋಟದ ಕೆಳಭಾಗದಲ್ಲಿರುವ ಚಿಕ್ಕ ಡ್ಯಾಂಗೆ ತೆರಳಿದ್ದರು. ಈ ವೇಳೆ ನೀರಿಗೆ ಇಳಿದ ಮದನ ಮುಳುಗತೊಡಗಿದ್ದಾನೆ. ಇದನ್ನು ಕಂಡ ಹರ್ಷಾ ತಮ್ಮನನ್ನು ರಕ್ಷಿಸಲು ತಕ್ಷಣವೇ ನೀರಿಗೆ ಧುಮುಕಿದ್ದಾನೆ. ಆದರೆ ನೀರಿನ ಆಳ ಮತ್ತು ಸೆಳೆತಕ್ಕೆ ಸಿಲುಕಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ಗ್ರಾಮೀಣ ಪೊಲೀಸರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಶ್ರೀ ಮಾರಿಕಾಂಬಾ ಲೈಫ್ ಗಾರ್ಡ್ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿತು. ಸತತ ಕಾರ್ಯಾಚರಣೆಯ ಬಳಿಕ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ ಶ್ರೀ ಮಾರಿಕಾಂಬಾ ಲೈಫ್ ಗಾರ್ಡ್‌ನ ಗೋಪಾಲ ಗೌಡಾ, ರಾಜು ಮಡಿವಾಳ, ಪ್ರದೀಪ ಎಸಳೆ, ದೀಪಕ ಕಾನಡೆ ಹಾಗೂ ದರ್ಶನ ಕಬ್ಬೆ ಸೇರಿದಂತೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ತಮ್ಮನನ್ನು ರಕ್ಷಿಸಲು ಜೀವದ ಹಂಗು ತೊರೆದು ಕಾಪಾಡಲು ಹೋದ ಅಣ್ಣನೂ ಪ್ರಾಣ ಕಳೆದುಕೊಂಡಿರುವ ಈ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಕಂಬನಿ ಮಿಡಿಯುವಂತೆ ಮಾಡಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago