ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬೀರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಮಿಥುನ್ (18) ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ಬಳಿ ಅಳವಡಿಸಲಾಗಿದ್ದ ವಿದ್ಯುತ್ ದೀಪಾಲಂಕಾರದ ತಂತಿಯನ್ನು ಬಿಡಿಸುವ ಸಂದರ್ಭದಲ್ಲಿ ಆತನಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ವಿದ್ಯುತ್ ಸ್ಪರ್ಶದಿಂದ ಮಿಥುನ್ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಅವಘಡಕ್ಕೆ ನಿಖರ ಕಾರಣವೇನು ಹಾಗೂ ವಿದ್ಯುತ್ ಸಂಪರ್ಕದಲ್ಲಿ ಯಾವುದೇ ಲೋಪವಾಗಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಣೇಶ ವಿಸರ್ಜನೆಗೂ ಮುನ್ನವೇ ಸಂಭವಿಸಿದ ಈ ದುರಂತದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ವರದಿ: ರೋಷನ್ ಜಮೀರ್

Related News

error: Content is protected !!