ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬೀರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಮಿಥುನ್ (18) ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ಬಳಿ ಅಳವಡಿಸಲಾಗಿದ್ದ ವಿದ್ಯುತ್ ದೀಪಾಲಂಕಾರದ ತಂತಿಯನ್ನು ಬಿಡಿಸುವ ಸಂದರ್ಭದಲ್ಲಿ ಆತನಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ವಿದ್ಯುತ್ ಸ್ಪರ್ಶದಿಂದ ಮಿಥುನ್ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಅವಘಡಕ್ಕೆ ನಿಖರ ಕಾರಣವೇನು ಹಾಗೂ ವಿದ್ಯುತ್ ಸಂಪರ್ಕದಲ್ಲಿ ಯಾವುದೇ ಲೋಪವಾಗಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಣೇಶ ವಿಸರ್ಜನೆಗೂ ಮುನ್ನವೇ ಸಂಭವಿಸಿದ ಈ ದುರಂತದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ವರದಿ: ರೋಷನ್ ಜಮೀರ್
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…
ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ…