Latest

ಇ-ಮೇಲ್ ಬಾಂಬ್ ಬೆದರಿಕೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಬಂಧನ, ಪ್ರಮುಖ ಆರೋಪಿ ಮೈಸೂರಿನಲ್ಲಿ ವಶಕ್ಕೆ

ಭಟ್ಕಳ, ಜುಲೈ 15 – ನಗರದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶದಿಂದ ಭಯಾನಕ ವಾತಾವರಣ ಮೂಡಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ತಮಿಳುನಾಡು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಭಟ್ಕಳ ಪೊಲೀಸ್ ಠಾಣೆಗೆ ತನಿಖೆಯು ತಲುಪಿದಂತೆ, ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿ ತನಿಖೆಗೆ ಸಹಕರಿಸಲು ಬಂದಿದ್ದರು. ತನಿಖೆಯ ವೇಳೆ, ಅವರ ಮೊಬೈಲ್‌ನ್ನು ಬಳಸಿಕೊಂಡು ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಶ್ನೆ ಆರಂಭಿಸಿದ್ದಾರೆ.

ಈ ಪ್ರಕರಣದಲ್ಲಿ ನಿಜವಾದ ಮೊದಲು ದಾರಿ ಹಾಕಿದ್ದಂತಹ ವ್ಯಕ್ತಿಯೆನಿಸಿಕೊಂಡಿರುವ ನಿತೀನ್ ಸುರೇಂದ್ರ ಶರ್ಮಾ ಎಂಬಾತನನ್ನು ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಈತ ಮೊದಲು ಹಲವು ರಾಜ್ಯಗಳಲ್ಲಿ ಇಂತಹ ಭಯೋತ್ಪಾದನಾ ಬೆದರಿಕೆ ಸಂದೇಶಗಳನ್ನು ಕಳಿಸಿದ್ದ ಹಿನ್ನೆಲೆ ಇದ್ದು, ಇತನ ವಿರುದ್ಧ ವಿವಿಧ ಪ್ರಕರಣಗಳೂ ದಾಖಲಾಗಿವೆ.

ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಪೊಲೀಸರು ಜಂಟಿಯಾಗಿ ನಡೆಸಿದ ಸಂಶೋಧನೆ ಮೂಲಕ ಆರೋಪಿಯ ಮಾಹಿತಿ ಖಚಿತವಾಗಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಾರವಾರಕ್ಕೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸನ್ನಾಹ ನಡೆಯುತ್ತಿದೆ.

ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಭದ್ರತಾ ವಿಚಾರದಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ. ಈ ರೀತಿಯ ಸೈಬರ್ ಬೆದರಿಕೆಗಳ ವಿರುದ್ಧ ಪೊಲೀಸರು ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ವರದಿ: ಮಂಜುನಾಥ ಎಫ್ ಎಚ್

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

13 minutes ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

14 minutes ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

17 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

46 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

1 hour ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

1 hour ago