ಭಟ್ಕಳ, ಜುಲೈ 15 – ನಗರದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶದಿಂದ ಭಯಾನಕ ವಾತಾವರಣ ಮೂಡಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ತಮಿಳುನಾಡು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಭಟ್ಕಳ ಪೊಲೀಸ್ ಠಾಣೆಗೆ ತನಿಖೆಯು ತಲುಪಿದಂತೆ, ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿ ತನಿಖೆಗೆ ಸಹಕರಿಸಲು ಬಂದಿದ್ದರು. ತನಿಖೆಯ ವೇಳೆ, ಅವರ ಮೊಬೈಲ್‌ನ್ನು ಬಳಸಿಕೊಂಡು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಶ್ನೆ ಆರಂಭಿಸಿದ್ದಾರೆ.
ಈ ಪ್ರಕರಣದಲ್ಲಿ ನಿಜವಾದ ಮೊದಲು ದಾರಿ ಹಾಕಿದ್ದಂತಹ ವ್ಯಕ್ತಿಯೆನಿಸಿಕೊಂಡಿರುವ ನಿತೀನ್ ಸುರೇಂದ್ರ ಶರ್ಮಾ ಎಂಬಾತನನ್ನು ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಈತ ಮೊದಲು ಹಲವು ರಾಜ್ಯಗಳಲ್ಲಿ ಇಂತಹ ಭಯೋತ್ಪಾದನಾ ಬೆದರಿಕೆ ಸಂದೇಶಗಳನ್ನು ಕಳಿಸಿದ್ದ ಹಿನ್ನೆಲೆ ಇದ್ದು, ಇತನ ವಿರುದ್ಧ ವಿವಿಧ ಪ್ರಕರಣಗಳೂ ದಾಖಲಾಗಿವೆ.
ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಪೊಲೀಸರು ಜಂಟಿಯಾಗಿ ನಡೆಸಿದ ಸಂಶೋಧನೆ ಮೂಲಕ ಆರೋಪಿಯ ಮಾಹಿತಿ ಖಚಿತವಾಗಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಾರವಾರಕ್ಕೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸನ್ನಾಹ ನಡೆಯುತ್ತಿದೆ.
ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಭದ್ರತಾ ವಿಚಾರದಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ. ಈ ರೀತಿಯ ಸೈಬರ್ ಬೆದರಿಕೆಗಳ ವಿರುದ್ಧ ಪೊಲೀಸರು ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ವರದಿ: ಮಂಜುನಾಥ ಎಫ್ ಎಚ್
ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…
ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…
ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…
ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…