Latest

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಪ್ರಸಾದ್, ಲಿಖಿತ್ ಕಡ್ಡಿ ಹಾಗೂ ಜಯದೀಪ್ ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಕುಖ್ಯಾತ ಮನೆಕಳ್ಳ ಪೆಪ್ಸಿ ರಘು ತಂಡದ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ಕತ್ರಿಗುಪ್ಪೆಯ ನಿವಾಸಿ ವಿಶ್ವನಾಥ್ ಅವರು ತಮ್ಮ ಕುಟುಂಬದೊಂದಿಗೆ ಮದುವೆ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ಟೆರಸ್ ಮೂಲಕ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ 24 ಲಕ್ಷ ನಗದು ಹಣ, 175 ಗ್ರಾಂ ಚಿನ್ನಾಭರಣ ಹಾಗೂ ಸುಮಾರು ಒಂದೂವರೆ ಕೆಜಿ ಬೆಳ್ಳಿ ನಾಣ್ಯವನ್ನು ಲೂಟಿ ಮಾಡಿದ್ದರು.

ಕಳ್ಳತನದ ನಂತರ ಆರೋಪಿಗಳು ದೋಚಿದ ಹಣವನ್ನು ಗೋವಾ ಕ್ಯಾಸಿನೊಗಳಲ್ಲಿ ಫೂಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೆಪ್ಸಿ ರಘು ಎಂಬ ರಘುವನಹಳ್ಳಿ ಮೂಲದ ವ್ಯಕ್ತಿ ಇನ್ನೂ ಪರಾರಿಯಾಗಿದ್ದಾನೆ. ಪೊಲೀಸರ ತಂಡ ಈಗಾಗಲೇ ಆತನ ಪತ್ತೆಗೆ ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧನ ಸಾಧ್ಯವೆಂಬ ನಂಬಿಕೆ ವ್ಯಕ್ತಪಡಿಸಲಾಗಿದೆ.

ಬಂಧಿತ ಆರೋಪಿಗಳಿಂದ 9 ಲಕ್ಷ ನಗದು, 175 ಗ್ರಾಂ ಚಿನ್ನಾಭರಣ ಹಾಗೂ ಒಂದೂವರೆ ಕೆಜಿ ಬೆಳ್ಳಿ ನಾಣ್ಯ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ನಂತರ ಇನ್ನಷ್ಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago