Categories: CrimeLatest

ಮಾಜಿ ಸೈನಿಕ ಸಂದೀಪ್ ಸಾವು ಪ್ರಕರಣ: ಪತ್ನಿ ಸೇರಿ 10 ಮಂದಿ ಬಂಧನ

ಬೆಳಗಾವಿ: ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಅಪಘಾತಕ್ಕೊಳಗಾದ ಸಂದೀಪ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದರು. ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಪರಿಗಣಿಸಲಾಗಿತ್ತು. ಆದರೆ ಮೃತರ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಮರು ತನಿಖೆ ಆರಂಭಿಸಿದರು.

ತನಿಖೆಯ ವೇಳೆ ಸಂದೀಪ್ ಅವರ ಪತ್ನಿ ಸುಮಾ ಮಂಜರಗಿ ಹಾಗೂ ಪುಂಡಲೀಕ ಎಂಬ ವ್ಯಕ್ತಿಯ ನಡುವಿನ ಆಪ್ತ ಸಂಬಂಧದ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ. ಇದೇ ವೇಳೆ ಸಂದೀಪ್ ಅವರ ಸಾವಿಗೆ ಸಂಚು ರೂಪಿಸಲಾಗಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.

ಪ್ರಕರಣದ ತನಿಖೆ ಮುಂದುವರಿದಂತೆ ಆಸ್ಪತ್ರೆಯ ಕೆಲ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಯಲ್ಲಿ ಅಕ್ರಮ ನಡೆದಿರುವ ಆರೋಪಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದಲ್ಲದೆ, ಸಂದೀಪ್ ಅವರ ಸಾವಿನ ನಂತರ ವಿಮಾ ಕಂಪನಿಯಿಂದ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಹಣದ ವ್ಯವಹಾರಗಳ ಮೇಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರ್ಥಿಕ ವ್ಯವಹಾರಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.

ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

44 seconds ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago